ಮನೆ ಕಾನೂನು ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 11 ವರ್ಷ ಜೈಲು ಶಿಕ್ಷೆ ವಿಧಿಸಿದ ಮಂಗಳೂರು ಕೋರ್ಟ್

ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 11 ವರ್ಷ ಜೈಲು ಶಿಕ್ಷೆ ವಿಧಿಸಿದ ಮಂಗಳೂರು ಕೋರ್ಟ್

0

ಮಂಗಳೂರು(Mangalore):  ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ 11 ವರ್ಷಗಳ ಕಾರಾಗೃಹ ಶಿಕ್ಷ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ 2ನೇ ತ್ವರಿತಗತಿ ವಿಶೇಷ ಫೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ.

ಬಜ್ಪೆಯ ಕಂದಾವರ ನಿವಾಸಿ ಅಬ್ದುಲ್ ಲತೀಫ್(41) ಎಂಬಾತ ಶಿಕ್ಷೆಗೊಳಗಾದ ಅಪರಾಧಿ.

ಏನಿದು ಪ್ರಕರಣ ? :

ಆರೋಪಿ ಬಜ್ಪೆಯ ಕೈಕಂಬದಲ್ಲಿ ಫಾತಿಮಾ ಡ್ರೆಸ್ ಕಲೆಕ್ಷನ್ ಎಂಬ ಬಟ್ಟೆ ಅಂಗಡಿಯನ್ನು ನಡೆಸುತ್ತಿದ್ದ. 2017ರಲ್ಲಿ ಈತ ತನ್ನ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಗೆ ಅಮಲು ಪದಾರ್ಥ ಮಿಶ್ರಿತ ಜ್ಯೂಸ್ ನೀಡಿ ಅತ್ಯಾಚಾರ ಎಸಗಿದ್ದನು. ಅಲ್ಲದೇ ಯಾರಲ್ಲಾದರೂ ಈ ವಿಚಾರವನ್ನು ತಿಳಿಸಿದರೆ ಹತ್ಯೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದನು.

ಈ ವಿಚಾರವನ್ನು ಬಾಲಕಿ ಮನೆಯವರಲ್ಲಿ ತಿಳಿಸಿದ್ದು, ಬಳಿಕ ಬಜ್ಪೆ ಠಾಣೆಗೆ ಪಾಲಕರೊಂದಿಗೆ ಆಗಮಿಸಿ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಯು ಪೊಲೀಸರ ಕೈಗೆ ಸಿಗದೇ ಸುಮಾರು ಎರಡು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ. ಆದರೆ ಆ ಬಳಿಕ ಪೊಲೀಸರು ಆರೋಪಿಯನ್ನು ಗದಗ ಜಿಲ್ಲೆಯಲ್ಲಿ ಬಂಧಿಸಿದ್ದರು.

ಈ ಪ್ರಕರಣದ ತನಿಖೆ ನಡೆಸಿದ ಬಜ್ಪೆ ಠಾಣೆಯ ಅಂದಿನ ಪೊಲೀಸ್ ಇನ್​​ಸ್ಪೆಕ್ಟರ್ ಕೆ.ಆರ್. ನಾಯ್ಕ್ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ರಾಧಕೃಷ್ಣ ಅವರು ವಾದವನ್ನು ಆಲಿಸಿ ಆರೋಪಿ ಅಬ್ದುಲ್ ಲತೀಫ್ ತಪ್ಪಿತಸ್ಥನೆಂದು ಘೋಷಿಸಿ, 11 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ ದಂಡ ವಿಧಿಸಿ ಆದೇಶಿಸಿದ್ದಾರೆ.

ಹಿಂದಿನ ಲೇಖನಜೆಡಿಎಸ್​ನಿಂದ ಉಚ್ಛಾಟಿಸಿರುವುದು ಸಂತಸ ತಂದಿದೆ: ಶಾಸಕ ಎಸ್ ಆರ್ ಶ್ರೀನಿವಾಸ್
ಮುಂದಿನ ಲೇಖನದೆಹಲಿಯ ಪೊಲೀಸ್‌ ಠಾಣೆಯಲ್ಲಿಯೇ ಪೊಲೀಸರಿಗೆ ಚೂರಿಯಿಂದ ಇರಿದ ವ್ಯಕ್ತಿ