Saval TV on YouTube
ಮಂಗಳೂರು(Mangalore): ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ (87) ತಮ್ಮ ನಿವಾಸದಲ್ಲಿ ಮಂಗಳವಾರ ವಯೋಸಹಜ ಕಾರಣಗಳಿಂದ ನಿಧನ ಹೊಂದಿದರು.
ಕನ್ನಡದ ಪ್ರಖ್ಯಾತ ಲೇಖಕಿಯಾದ ಇವರು ಜೂನ್ 30, 1936 ರಂದು ಕಾಸರಗೋಡಿನ ಚಂದ್ರಗಿರಿ ತೀರದ ಗ್ರಾಮವೊಂದರಲ್ಲಿ ಜನಿಸಿದರು.
ಸುಮಾರು 10 ಕಾದಂಬರಿ, 6 ಕಥಾ ಸಂಕಲನಗಳು, 5 ಬಾನುಲಿ ನಾಟಕ, ಲೇಖನ, ಪ್ರವಾಸ ಕಥನ ಸಹಿತ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು.
ಸಾರಾ ಅಬೂಬಕ್ಕರ್ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ, ‘ಸಹನಾ’ಕಾದಂಬರಿಗೆ ವರ್ಧಮಾನ ಪ್ರಶಸ್ತಿ, ‘ಸುಳಿಯಲ್ಲಿ ಸಿಕ್ಕವರು’ ಕೃತಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ ಮತ್ತು ಸಂದೇಶ ಪ್ರಶಸ್ತಿ, ಅನುಪಮ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಮುಂತಾದ ಹಲವಾರು ಪ್ರಮುಖ ಪ್ರಶಸ್ತಿ ಗೌರವಗಳು ಸಂದಿವೆ.