ಬೆಂಗಳೂರು(Begaluru): ‘ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ’ ಎಂದು ಪ್ರಧಾನಿ ಮೋದಿ ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ.
ಮಂಗಳೂರಿನಲ್ಲಿ ಶುಕ್ರವಾರ ನಡೆದ ಸಮಾವೇಶದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜನೆಗೊಂಡಿದ್ದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿ ಅವರು, ₹ 3,800 ಕೋಟಿ ಮೊತ್ತದ 8 ಯೋಜನೆಗಳಿಗೆ ಚಾಲನೆ ನೀಡಿದ್ದರು.
ಮೈದಾನದಲ್ಲಿ ಅಪಾರ ನೆರೆದಿದ್ದ ಜನರು ‘ಮೋದಿ… ಮೋದಿ…’ ಘೋಷಣೆಗಳನ್ನು ಕೂಗುವ ಮೂಲಕ ಹರ್ಷೋದ್ಗಾರ ಮಾಡಿದ್ದರು. ಸಮಾವೇಶ ಮುಗಿಸಿ ದೆಹಲಿಗೆ ವಾಪಸ್ ಆಗಿರುವ ಮೋದಿ, ಹಲವು ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಇಲ್ಲಿನ ಜನರ ಪ್ರೀತಿಯ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.
Saval TV on YouTube