ಮನೆ ರಾಜ್ಯ ಮಂಗಳೂರು: ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ

ಮಂಗಳೂರು: ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ

0

ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸಂದೇಶ ನೀಡಿ ಮಾತನಾಡಿದರು.

ಜೀವನ ಸಾಗಿಸಲು ತೀವ್ರ ಯಾತನೆ ಪಡುತ್ತಿದ್ದ ಜನ ಸಾಮಾನ್ಯರ ಬದುಕಿನಲ್ಲಿ ಹರ್ಷದ ಹೊನಲು ಹರಿಸುವಲ್ಲಿ ಯಶಸ್ವಿಯಾಗಿದ್ದೇವೆ. ಗೃಹಲಕ್ಷ್ಮೀ ಯೋಜನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ 3.44 ಲಕ್ಷ ಫಲಾನುಭವಿಗಳು ನೋಂದಣಿ ಮಾಡಿದ್ದಾರೆ. ಎಲ್ಲಾ ಫಲಾನುಭವಿಗಳಿಗೂ ಮಾಸಿಕ ಎರಡು ಸಾವಿರ ರೂ. ನೀಡಲಾಗುತ್ತಿದೆ. ತಾಂತ್ರಿಕ ಸಮಸ್ಯೆಗಳಿಂದ ಜಮೆಯಾಗದ ಫಲಾನುಭವಿಗಳ ಸಮಸ್ಯೆ ಬಗೆಹರಿಸಲು ಒತ್ತು ನೀಡಲಾಗುತ್ತಿದೆ ಎಂದರು.

ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ 248 ಲಕ್ಷ ಫಲಾನುಭವಿಗಳಿದ್ದಾರೆ. ಇವರಿಗೆ ನಗದು ವರ್ಗಾವಣೆ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಇದುವರೆಗೂ 17,30 ಕೋಟಿ ರೂಪಾಯಿ ಮೊತ್ತವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡುವ ಮೂಲಕ ಬಡವರ ಬಾಳನಲ್ಲಿ ನೆಮ್ಮದಿ ತರಲಾಗಿದೆ ಅಂದರು.

ಈ ಸಮಾರಂಭದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್, ಮನಪಾ ಮೇಯರ್ ಸುಧೀರ್ ಶೆಟ್ಟಿ, ಶಾಸಕ ವೇದವ್ಯಾಸ ಕಾಮತ್, ದ.ಕ. ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್, ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಜಿ.ಪಂ. ಸಿಇಒ ಡಾ. ಆನಂದ್, ಮನಪಾ ಆಯುಕ್ತ ಆನಂದ್ ಮೊದಲಾದವರು ಉಪಸ್ಥಿತರಿದ್ದರು.

ಇದೇ ವೇಳೆ 46 ಮಂದಿಗೆ ಹಾಗೂ 17 ಸಂಸ್ಥೆಗಳಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.