ಮಂಗಳೂರು: ಲೋ ಬಿಪಿಯಿಂದ ಹೃದಯಾಘಾತ ಸಂಭವಿಸಿ ನರ್ಸಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ.
ಸುಮಾ(19) ಮೃತ ವಿದ್ಯಾರ್ಥಿನಿ.
ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದ ಸುಮಾಗೆ ಲೋ ಬಿಪಿಯಾಗಿ ಹೃದಯಾಘಾತವಾಗಿ ಸಾವು ಸಂಭವಿಸಿದೆ.
ಕೆಲ ದಿನಗಳ ಹಿಂದೆ ಸುಮ ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆದು ಮನೆಯಲ್ಲಿದ್ದರು. ಆಗಸ್ಟ್ 9 ರಂದು ಅನಾರೋಗ್ಯದ ಕಾರಣ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಬಳಿಕ ಆ.11 ರಂದು ಮತ್ತೆ ಆರೋಗ್ಯ ಹಾಳಾಗಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.
ಆದರೆ ಆ.13 ರಂದು ಸಂಜೆ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.