ಮನೆ ಅಪರಾಧ ಮಂಗಳೂರು: ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಸಾವು

ಮಂಗಳೂರು: ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಸಾವು

0

ಮಂಗಳೂರು(ದಕ್ಷಿಣ ಕನ್ನಡ): ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಮಂಗಳೂರು ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ.

Join Our Whatsapp Group

ಮೃತ ರಿಕ್ಷಾ ಚಾಲಕರನ್ನು ರಾಜು ಮತ್ತು ದೇವರಾಜು ಎಂದು ಗುರುತಿಸಲಾಗಿದೆ. ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು. ಮುಂಜಾನೆ ಒಬ್ಬರು ರಿಕ್ಷಾ ಸ್ವಚ್ಚ ಗೊಳಿಸಲು ಹೊರಬಂದಿದ್ದು, ರಿಕ್ಷಾ ತೊಳೆಯುವ ವೇಳೆ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದರು. ಇದನ್ನು ಕಂಡ ಇನ್ನೊಬ್ಬ ಚಾಲಕ ಗೋಣಿ ಚೀಲ ಹಿಡಿದು ರಕ್ಷಣೆಗೆ ಮುಂದಾಗಿದ್ದು, ಅವರೂ ವಿದ್ಯುತ್ ಆಘಾತಕ್ಕೆ ಒಳಗಾಗಿರಬಹುದು.

ಮೃತದೇಹಗಳನ್ನು ವೆನ್ಲಾಕ್‌ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.