ಮನೆ ಅಪರಾಧ ಮಂಗಳೂರು: ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಯುವಕನ ಬಂಧನ

ಮಂಗಳೂರು: ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಯುವಕನ ಬಂಧನ

0

ಮಂಗಳೂರು: ಮಂಗಳೂರು ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಯುವಕನನ್ನು ಬಂಧಿಸಲಾಗಿದೆ.

ಶನೀಝ್(23) ಬಂಧಿತ ಯುವಕ.

ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಕಂಕನಾಡಿ ಮತ್ತು ಬೆಂದೂರ್‌ವೆಲ್ ಪ್ರದೇಶಗಳಲ್ಲಿ ಕಳವಾಗಿದ್ದ ದ್ವಿಚಕ್ರ ವಾಹನಗಳ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು. ಪಂಪ್‌ವೆಲ್ ಮೇಲ್ಸೇತುವೆ ಬಳಿ ವಾಹನಗಳನ್ನು ಪರಿಶೀಲಿಸುತ್ತಿದ್ದಾಗ ನಂಬರ್‌ ಪ್ಲೇಟ್ ಇಲ್ಲದ ಸ್ಕೂಟರ್‌ ನಲ್ಲಿ ಸಂಚರಿಸುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಬಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈತನಿಂದ ಸುಮಾರು 1.01 ಲಕ್ಷ ಮೌಲ್ಯದ 2 ದ್ವಿಚಕ್ರ ವಾಹನಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಹಿಂದಿನ ಲೇಖನಈ ವಾರ ತೆರೆ ಕಾಣುತ್ತಿರುವ ಚಿತ್ರಗಳ ಮಾಹಿತಿ
ಮುಂದಿನ ಲೇಖನಕೆರೆಗಳನ್ನು ತುಂಬಿಸುವ ಹಾಗೂ ಬ್ಯಾರೇಜ್ ನಿರ್ಮಾಣ ಕಾರ್ಯಗಳಿಗೆ ಒತ್ತು ನೀಡಿ: ಸಣ್ಣ ನೀರಾವರಿ ಸಚಿವ ಎನ್. ಎಸ್ ಬೋಸರಾಜು ಸೂಚನೆ