ಮಂಗಳೂರು (ದಕ್ಷಿಣ ಕನ್ನಡ): ಗ್ಲೋಬಲ್ ಮಾರುಕಟ್ಟೆ ಗೆ ಬೆಂಕಿ ಹಿಡಿದ ಪರಿಣಾಮ ಕೆಲವು ಅಂಗಡಿಗಳ ಸಾಮಗ್ರಿಗಳು ಬೆಂಕಿಗಾಹುತಿಯಾಗಿರುವ ಘಟನೆ ಮಂಗಳೂರಿನ ಕಲ್ಲಾಪು ಎಂಬಲ್ಲಿ ನಡೆದಿದೆ.
ಮಾರುಕಟ್ಟೆ ಮೇಲೆ ಹಾಕಲಾಗಿದ್ದ ಶೀಟು, ಅಂಗಡಿಗಳಲ್ಲಿ ಆಹಾರ ಸಾಮಾಗ್ರಿ ಶೇಖರಣೆ ಮಾಡಿಕೊಡುವ ಕಪಾಟು, ಟೇಬಲ್ ಫ್ರೂಟ್ಸ್, ನಗದು ಸಹಿತ ಇತರ ಸಾಮಾಗ್ರಿಗಳು ಬೆಂಕಿಗಾಹುತಿಯಾಗಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಅಧಿಕಾರಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
Saval TV on YouTube