ಮನೆ ರಾಜ್ಯ ಮಂಗಳೂರು: ಸಿಟಿ ಸೆಂಟರ್ ಬಳಿ ಹೊತ್ತಿ ಉರಿದ ಕಾರು- ಮಹಿಳೆ ಪಾರು  

ಮಂಗಳೂರು: ಸಿಟಿ ಸೆಂಟರ್ ಬಳಿ ಹೊತ್ತಿ ಉರಿದ ಕಾರು- ಮಹಿಳೆ ಪಾರು  

0

 
ಮಂಗಳೂರು: ಮಂಗಳೂರಿನಲ್ಲಿ ಮತ್ತೊಂದು ಕಾರು ಬೆಂಕಿಗಾಹುತಿಯಾಗಿರುವ ಘಟನೆ ನಗರದ ಸಿಟಿ ಸೆಂಟರ್ ಸಮೀಪ ಸೋಮವಾರ (ಡಿ.16) ಬೆಳಿಗ್ಗೆ ಸಂಭವಿಸಿದೆ.  

Join Our Whatsapp Group


ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರನ್ನು ಸಿಟಿ ಸೆಂಟರ್ ಬಳಿ ಇರುವ ಫ್ಲಾಟ್ ಬಳಿ ನಿಲ್ಲಿಸಿದ ವೇಳೆ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ ಇದಾದ ಕೆಲವೇ ಹೊತ್ತಿನಲ್ಲಿ ಕಾರು ಬೆಂಕಿಗಾಹುತಿಯಾಗಿದೆ ಎಂದು ಹೇಳಲಾಗಿದೆ.  


ಸ್ಥಳೀಯರು ಅಗ್ನಿಶಾಮಕಕ್ಕೆ ಕರೆ ಮಾಡಿದ್ದು ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ತಂಡ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.