ಮನೆ ರಾಜಕೀಯ ಜೆಜೆಎಂ ಕಾಮಗಾರಿಯ ಭ್ರಷ್ಟಾಚಾರದಲ್ಲಿ ನಾನು ಸೇರಿ ಅನೇಕ ಜನಪ್ರತಿನಿಧಿಗಳು ಭಾಗಿ: ಕೊಪ್ಪಳ ಸಂಸದ ಸಂಗಣ್ಣ ಕರಡಿ

ಜೆಜೆಎಂ ಕಾಮಗಾರಿಯ ಭ್ರಷ್ಟಾಚಾರದಲ್ಲಿ ನಾನು ಸೇರಿ ಅನೇಕ ಜನಪ್ರತಿನಿಧಿಗಳು ಭಾಗಿ: ಕೊಪ್ಪಳ ಸಂಸದ ಸಂಗಣ್ಣ ಕರಡಿ

0

ಕೊಪ್ಪಳ: ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿಯಲ್ಲಿ ಹಣ ಲೂಟಿಯಾಗುತ್ತಿದೆ. ಕಾಮಗಾರಿಯಲ್ಲಿ ನಾನು ಸೇರಿ ಅನೇಕ ಜನಪ್ರತಿನಿಧಿಗಳು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಕೊಪ್ಪಳದ ಬಿಜೆಪಿ ಸಂಸದ ಸಂಗಣ್ಣ ಕರಡಿ ಅವರು ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಕಾರಟಗಿ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹಿರಂಗವಾಗಿ ತಾವು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದಾಗಿ ಹೇಳಿಕೆ ನೀಡಿರುವ ಸಂಸದ ಸಂಗಣ್ಣ ಕರಡಿ, ತಾವು ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿಯಲ್ಲಿ ನಡೆದ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದಾಗಿ ತಿಳಿಸಿದ್ದಾರೆ.

 ಜೆಜೆಎಂ ಕಾಮಗಾರಿಯಲ್ಲಿ ಹಣವನ್ನು ಲೂಟಿ ಹೊಡೆಯಲಾಗುತ್ತಿದೆ. ಜೆಜೆಎಂ ಯೋಜನೆಯ ಕಾಮಗಾರಿಯಲ್ಲಿ ರಿವೈಸ್ ಎಸ್ಟಿಮೇಟ್​​​​ನಿಂದ ಹೊಸ ಡಿಪಿಆರ್ ಮಾಡಿಸುವವರೆಗೂ ಹಣ ಲೂಟಿ ಮಾಡಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ 123 ಕೋಟಿ ರೂಪಾಯಿ ಯೋಜನೆಗೆ ಮತ್ತೆ 6 ತಿಂಗಳಲ್ಲಿ 123 ಕೋಟಿ ರೂ. ಪುನಃ ಅನುದಾನ ಕೇಳಲಾಗಿದೆ. ಅಕ್ರಮದಲ್ಲಿ ಸಂಸದರಿಂದ ಹಿಡಿದು ಎಲ್ಲರೂ ಹಣ ದೋಚಿದ್ದಾರೆ. ಇದರಲ್ಲಿ ನಾನು ಕೂಡ ಭಾಗಿಯಾಗಿದ್ದೇನೆ. ನಾವೇನೂ ಹರಿಶ್ಚಂದ್ರರಲ್ಲ, ನ್ಯಾಯ ಅನ್ಯಾಯವನ್ನು ನೋಡಬೇಕು. ಅನ್ಯಾಯದಿಂದ ಹಣ ಗಳಿಸಿದವರು ನೆಮ್ಮದಿಯಿಂದ ನಿದ್ದೆ ಮಾಡಲ್ಲ. ದುಡಿದು ತಿನ್ನೋರು ನೆಮ್ಮದಿಯಿಂದ ನಿದ್ದೆ ಮಾಡ್ತಾರೆ ಎಂದು ತಾವು ಮಾಡಿದ ತಪ್ಪಿನ ಬಗ್ಗೆ ಹೇಳಿಕೊಂಡಿದ್ದಾರೆ.