ಮನೆ ಕಾನೂನು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಮರಕುಂಬಿ ಪ್ರಕರಣದ ಅಪರಾಧಿ

ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಮರಕುಂಬಿ ಪ್ರಕರಣದ ಅಪರಾಧಿ

0

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ಅಸ್ಪೃಶ್ಯತೆ ಪ್ರಕರಣದಲ್ಲಿ ಐದು ವರ್ಷ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಕೋರ್ಟು ತೀರ್ಪು ಪ್ರಕರಣದ ಬೆನ್ನಲ್ಲೇ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

Join Our Whatsapp Group

ಮೃತನಾದ ಅಪರಾಧಿಯನ್ನು ರಾಮಣ್ಣ ತಂದೆ ಲಕ್ಷ್ಮಣ ಭೋವಿ (30) ಎಂದು ಗುರುತಿಸಲಾಗಿದೆ.

ಮರಕುಂಬಿ ಗ್ರಾಮದಲ್ಲಿ 2014ರಲ್ಲಿ ನಡೆದ ಅಸ್ಪೃಶ್ಯತೆ ಆಚರಣೆ ಪ್ರಕರಣದಲ್ಲಿ ರಾಮಣ್ಣ ಭೋವಿ ಮೇಲೂ ಆರೋಪ ಕೇಳಿ ಬಂದಿತ್ತು. ಈತನೂ ಸೇರಿದಂತೆ 117 ಜನರ ಮೇಲೆ ಪ್ರಕರಣ ದಾಖಲಾಗಿತ್ತು. ಇತ್ತೀಚೆಗೆ ಕೊಪ್ಪಳ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಿ ಚಂದ್ರಶೇಖರ ಅವರು 101 ಜನರು ಈ ಪ್ರಕರಣದಲ್ಲಿ ದೋಷಿಗಳು ಎಂದು ತೀರ್ಪು ನೀಡಿದ್ದರು. ಗುರುವಾರ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ಹಾಗೂ 3 ಅಪರಾಧಿಗಳಿಗೆ 5 ವರ್ಷ ಜೈಲು ಹಾಗೂ ದಂಢ ವಿಧಿಸಿ ತೀರ್ಪು ಪ್ರಕಟಿಸಿದ್ದರು.

ನ್ಯಾಯಾಧೀಶರ ಈ ತೀರ್ಪು ಪ್ರಕಟವಾದ ಬೆನ್ನಲ್ಲೇ ಆರೋಪಿ ರಾಮಣ್ಣ ಬೋವಿ ತೀವ್ರ ಅಸ್ವಸ್ಥನಾಗಿದ್ದ, ಅಲ್ಲದೇ ಈತನು ಹೆಚ್ಐವಿ ಸೋಂಕಿತ ವ್ಯಕ್ತಿಯಾಗಿದ್ದನು‌. ಕೋರ್ಟ್ ತೀರ್ಪು ಬಳಿಕ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ. ಪೊಲೀಸರು ಹಾಗೂ ಜೈಲಾಧಿಕಾರಿಗಳು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಈತನು ಮೃತಪಟ್ಟಿದ್ದಾನೆ.

ಈತನು 5 ವರ್ಷದ ಜೈಲು ಶಿಕ್ಷೆಗೆ ಗುರಿಯಾಗಿದ್ದ. ಈ ಪ್ರಕರಣದಲ್ಲಿ ಈಗಾಗಲೇ 11 ಜನರು ತೀರ್ಪು ಬರುವ ಪೂರ್ವದಲ್ಲಿಯೇ ಮೃತಪಟ್ಟಿದ್ದಾರೆ. ಜೈಲಾಧಿಕಾರಿಗಳು ಮುಂದಿನ ಪ್ರಕ್ರಿಯೆ ಆರಂಭಿಸಿದ್ದಾರೆ.