ಮಂಡ್ಯ: ಮಹಡಿ ಮನೆ ಮೇಲೆ ಪ್ಲಾಸ್ಟಿಕ್ ಪಾಟ್ಗಳಲ್ಲಿ ಅಕ್ರಮವಾಗಿ ಬೆಳೆಯಲಾಗಿದ್ದ ೨೫ ಗಾಂಜಾ ಗಿಡಗಳನ್ನು ಪತ್ತೆಹಚ್ಚಿರುವ ಮದ್ದೂರು ಗ್ರಾಮಾಂತರ ಪೊಲೀಸರು ಶುಕ್ರವಾರ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದು ವರದಿಯಾಗಿದೆ.
ಮದ್ದೂರು ತಾಲೂಕಿನ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇಹಳ್ಳಿ ಗ್ರಾಮದ ನಿಂಗೇಗೌಡ ಅವರ ಪುತ್ರ ಕರಿಯಪ್ಪ ಎಂಬುವವರು ಮನೆಯ ಮೇಲಿನ ಪ್ಲಾಸ್ಟಿಕ್ ಪಾಟ್ಗಳಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆದಿದೆ.
ಮದ್ದೂರು ಗ್ರಾಮಾಂತರ ವೃತ್ತ ನಿರೀಕ್ಷಕ ವೆಂಕಟೇಗೌಡ ಅವರ ಮಾರ್ಗದರ್ಶನದಲ್ಲಿ ಕೊಪ್ಪ ಪೊಲೀಸ್ ಠಾಣೆಯ ಸಬ್ಇನ್ಸೆಕ್ಟರ್ ಹಾಗೂ ಸಿಬ್ಬಂದಿ ದಾಳಿ ಮಾಡಿ ೩ ಕೆ.ಜಿ. ೬೬೪ ಗ್ರಾಂ.ನಷ್ಟು ಗಾಂಜಾ ಸೊಪ್ಪನ್ನು ವಶಪಡಿಸಿಕೊಂಡಿದ್ದಾರೆ. ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














