ಮನೆ ಕಾನೂನು ವೈವಾಹಿಕ ಅತ್ಯಾಚಾರ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್

ವೈವಾಹಿಕ ಅತ್ಯಾಚಾರ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್

0

ನವದೆಹಲಿ: ವೈವಾಹಿಕ ಅತ್ಯಾಚಾರ ಅಪರಾಧಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಇದಕ್ಕೆ ಸಂಬಂಧಿಸಿದ ಮೊದಲ ಬ್ಯಾಚ್‌ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಮತ್ತು ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್‌. ನರಸಿಂಹ ಹಾಗೂ ಜೆ.ಬಿ. ಪಾರ್ದೀವಾಲಾ ಅವರಿದ್ದ ಪೀಠವು, ಫೆಬ್ರುವರಿ 15ರೊಳಗೆ ಪ್ರತಿಕ್ರಿಯೆ ಸಲ್ಲಿಸಲು ಸೂಚಿಸಿತು.

ಮಾರ್ಚ್‌ 21ರಿಂದ ಅಂತಿಮ ವಿಚಾರಣೆ ಆರಂಭಿಸುವುದಾಗಿ ಪ್ರಕಟಿಸಿತು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 375ರ ಅಡಿ ವೈವಾಹಿಕ ಅತ್ಯಾಚಾರವನ್ನು ಅಪರಾಧ ಮುಕ್ತಗೊಳಿಸುವ 2ನೇ ವಿನಾಯಿತಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಿಸಿ ದೆಹಲಿ ಹೈಕೋರ್ಟ್ ಕಳೆದ ವರ್ಷ ಮೇ 11ರಂದು ಭಿನ್ನ ತೀರ್ಪು ನೀಡಿತ್ತು. ಇದರ ವಿರುದ್ಧ ಖುಷ್ಬೂ ಸೈಫಿ ಸಲ್ಲಿಸಿರುವ ಮೇಲ್ಮನವಿಯೂ ಈ ಅರ್ಜಿಗಳಲ್ಲಿದೆ.

ನ್ಯಾಯಮೂರ್ತಿಗಳಿಬ್ಬರ ತೀರ್ಪು ಭಿನ್ನವಾಗಿರುವುದರಿಂದ ವೈವಾಹಿಕ ಅತ್ಯಾಚಾರ ಪ್ರಕರಣವನ್ನು ಮೂವರು ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾಯಿಸಿ, ಈ ಪ್ರಕರಣದಲ್ಲಿ ಕಾನೂನಾತ್ಮಕ ಅಂಶಗಳು ಅಡಕವಾಗಿರುವುದರಿಂದ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನ್ಯಾಯಮೂರ್ತಿಗಳು ಅನುಮತಿಸಿದ್ದರು.

ಹಿಂದಿನ ಲೇಖನವಯಾಕಾಮ್‌ 18 ಪಾಲಾದ ಮಹಿಳಾ ಐಪಿಎಲ್ ಪ್ರಸಾರದ ಹಕ್ಕು
ಮುಂದಿನ ಲೇಖನಹಾಸ್ಯ