ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮುಸುಕುಧಾರಿ ಬಂಧನ ಆಗಿರುವುದಾಗಿ ನಿಜ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಖಚಿತಪಡಿಸಿದ್ದಾರೆ.
ಮಾಸ್ಕ್ ಮ್ಯಾನ್ ಬಂಧನ ಆಗಿರುವುದು ನಿಜ ಹಾಗೂ ಆತ ಪೊಲೀಸ್ ಕಸ್ಟಡಿಯಲ್ಲಿ ಇದ್ದಾನೆ. ಈ ತನಿಖೆ ಪೂರ್ಣಗೊಳ್ಳುವವರೆಗೆ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ. ಅಧಿಕಾರಿಗಳು ತನಿಖೆ ಮುಂದುವರಿಸುತ್ತಾರೆ. ಹೆಚ್ಚಿನ ಮಾಹಿತಿ ಎಸ್‌ಐಟಿಯಿಂದ ಪಡೆಯುತ್ತೇನೆ. ಇದರ ಹಿಂದೆ ಯಾವ ಜಾಲ ಇದೆ ಅನ್ನುವುದನ್ನು ಪತ್ತೆ ಮಾಡಲಾಗುವುದು ಎಂದು ಹೇಳಿದರು.
ಬಿಜೆಪಿಯವರು ಅನೇಕ ಆರೋಪಗಳನ್ನ ಮಾಡಬಹುದು. ಬೇರೆ ಬೇರೆ ರೀತಿಯ ಹೇಳಿಕೆಗಳು ಬರಬಹುದು. ಹೇಳಿಕೆಗಳ ಆಧಾರದಲ್ಲಿ ತನಿಖೆ ಮಾಡಲು ಆಗಲ್ಲ. ಎಸ್‌ಐಟಿ ತನ್ನ ಅಂತಿಮ ವರದಿ ಸಲ್ಲಿಸುವವರಿಗೆ ಏನು ಹೇಳಲು ಆಗಲ್ಲ. ಯಾವ ಸೆಕ್ಷನ್‌ನಲ್ಲಿ ಬಂಧಿಸಲಾಗಿದೆ ಅನ್ನುವುದು ಎಸ್‌ಐಟಿಯವರಿಗೆ ಗೊತ್ತು. ದೂರುದಾರನ ಹೇಳಿಕೆ ಆಧಾರದಲ್ಲಿ ತನಿಖೆ ಪ್ರಾರಂಭಿಸಿದ್ದೆವು. ಆದ್ರೆ ಎಸ್‌ಐಟಿ ಹೇಳಿದ್ದೆಲ್ಲವನ್ನೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.














