ಮನೆ ಅಪರಾಧ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರ ಬಂಧನ

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರ ಬಂಧನ

0

ನವದೆಹಲಿ(New Delhi): ಕೆಲ ದಿನಗಳ ಹಿಂದೆ ದಕ್ಷಿಣ ದೆಹಲಿಯಿಂದ ಕಾಣೆಯಾಗಿದ್ದ 13 ವರ್ಷದ ಬಾಲಕಿಯನ್ನು ಸಾಕೇತ್ ಮೆಟ್ರೊ ನಿಲ್ದಾಣದ ಬಳಿ ರಕ್ಷಿಸಲಾಗಿದ್ದು, ವಿಚಾರಣೆ ವೇಳೆ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವುದು ದೃಢಪಟ್ಟಿದೆ.

ಪ್ರಕರಣ ಸಂಬಂಧ ಓರ್ವ ಅಪ್ರಾಪ್ತ ಸೇರಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ಮೋಹಿತ್ (20), ಆಕಾಶ್ (19), ಶಾರೂಖ್ (20) ಎಂದು ಗುರುತಿಸಲಾಗಿದೆ. ಇವರ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಏಪ್ರಿಲ್ 24ರ ಸಂಜೆ 5 ಗಂಟೆಗೆ ಮನೆಯಿಂದ ತೆರಳಿದ್ದ ಬಾಲಕಿವಾಪಸ್ ಆಗಿರಲಿಲ್ಲ. ಸ್ನೇಹಿತರು ಅಥವಾ ಸಂಬಂಧಿಕರ ಮನೆಗೆ ತೆರಳಿರಬಹುದೆಂದು ಪೋಷಕರು ಭಾವಿಸಿದ್ದರು. ರಾತ್ರಿಯಾದರೂ ಮಗಳು ಬಾರದಿದ್ದರಿಂದ ಭಯಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಮೇ 1ರಂದು ದಕ್ಷಿಣ ದೆಹಲಿಯಲ್ಲಿ ಬಾಲಕಿಯನ್ನು ಕರೆದೊಯ್ದಿದ್ದ ಆರೋಪಿ ಬಗ್ಗೆ ಮಾಹಿತಿದಾರರಿಂದ ಮಾಹಿತಿ ಸಿಕ್ಕಿತ್ತು. ಬಳಿಕ ಆತನನ್ನು ಬಂಧಿಸಿದ ಪೊಲೀಸರು ಆತ ನೀಡಿದ ಮಾಹಿತಿ ಮೇರೆಗೆ ಉಳಿದ ಮೂವರನ್ನು ಬಂಧಿಸಿದ್ದಾರೆ.

ಆರೋಪಿಗಳು ಅತ್ಯಾಚಾರ ನಡೆಸಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ ಎಂದು ಡಿಸಿಪಿ ಬೆನಿತಾ ಮೇರಿ ಜೈಕರ್ ತಿಳಿಸಿದ್ದಾರೆ.

ಮರುದಿನ, ಪೋಸ್ಟರ್‌ನಲ್ಲಿರುವ ಕಾಣೆಯಾಗಿರುವ ಬಾಲಕಿಯನ್ನು ಸಾಕೆತ್ ಮೆಟ್ರೋ ನಿಲ್ದಾಣದ ಬಳಿ ನೋಡಿದ್ದಾಗಿ ಮಹಿಳೆಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲಿಸರು ಸ್ಥಳಕ್ಕೆ ಹೋದಾಗ ಬಾಲಕಿ ಮತ್ತಿನಲ್ಲಿದ್ದಳು. ಆರೋಪಿಗಳು ಮತ್ತಿನ ಔಷಧವನ್ನು ಆಕೆಗೆ ತಿನ್ನಿಸಿರಬಹುದು ಎಂದು ಪೊಲೀಸರು ಹೇಳಿದ್ದಾರೆ.

ಬಳಿಕ, ಏಮ್ಸ್‌ ಆಸ್ಪತ್ರೆಗೆ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಹಿಂದಿನ ಲೇಖನಸಹಿ ಮಾಡಲ್ಪಟ್ಟ ಖಾಲಿ ಚೆಕ್ ಕೆಲವು ಪಾವತಿಗಾಗಿ ಹಸ್ತಾಂತರಿಸಿದರೆ ಸಮ್ಮಿಶ್ರ ಸಾಕ್ಷ್ಯದ ಅನುಪಸ್ಥಿತಿಯಲ್ಲಿ S. 139 NI ಕಾಯಿದೆಯ ಅಡಿಯಲ್ಲಿ ಊಹೆಗೆ ಒಳಗಾಗುತ್ತದೆ: ದ್ವಾರಕಾ ನ್ಯಾಯಾಲಯ
ಮುಂದಿನ ಲೇಖನಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: 7.38 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣ