ಮನೆ ರಾಜ್ಯ ಪ್ರಯಾಣಿಕರಿದ್ದ ಬಿಎಂಟಿಸಿ ಬಸ್‌ನಲ್ಲಿ ಭಾರೀ ಬೆಂಕಿ ಅವಘಡ..!

ಪ್ರಯಾಣಿಕರಿದ್ದ ಬಿಎಂಟಿಸಿ ಬಸ್‌ನಲ್ಲಿ ಭಾರೀ ಬೆಂಕಿ ಅವಘಡ..!

0

ಬೆಂಗಳೂರು : ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್‌ ಸುಟ್ಟು ಕರಕಲಾಗಿರುವ ಘಟನೆ ನಗರದ ಹೆಚ್ಎಎಲ್ ಮುಖ್ಯದ್ವಾರದ ಬಳಿ ನಡೆದಿದೆ.

ಇಂದು ಬೆಳಗ್ಗೆ 5.15ಕ್ಕೆ ಅಗ್ನಿ ದುರಂತ ಸಂಭವಿಸಿದೆ. ದುರಂತಕ್ಕೀಡಾದ ಬಸ್‌ ಮೆಜೆಸ್ಟಿಕ್‌ನಿಂದ ಕಾಡುಗೋಡಿಗೆ ತೆರಳುತ್ತಿತ್ತು. ಈ ಬಸ್‌ನಲ್ಲಿ ಸುಮಾರು 75 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.

ಬಸ್‌ ಚಲಿಸುತ್ತಿದ್ದಂತೆ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಎಚ್ಚೆತ್ತ ಚಾಲಕ, ನಿರ್ವಾಹಕರು ತಕ್ಷಣ ಪ್ರಯಾಣಿಕರನ್ನ ಕೆಳಗಿಳಿಸಿದ್ದಾರೆ. ಕ್ರಮೇಣ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡು ಬಸ್‌ ಧಗಧಗಿಸಿದೆ. ಚಾಲಕನ ಸಮಯಪ್ರಜ್ಷೆಯಿಂದ 75 ಪ್ರಯಾಣಿಕರು ಸೇಫ್‌ ಆಗಿದ್ದಾರೆ.

ನಂತರ ಹೆಚ್ಎಲ್ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೆಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸದ್ಯ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಎಂಟಿಸಿ ಬೆಂಕಿ ಕಾಣಿಸಿಕೊಳ್ಳಲು ಕಾರಣ ಪತ್ತೆ ಹಚ್ಚಲು ಮುಂದಾಗಿದೆ.