ಚಾಮರಾಜನಗರ(Chamarajangar): ಮಹದೇಶ್ವರ ಬೆಟ್ಟ ವನ್ಯಜೀವಿಧಾಮವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಣೆ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿ ಚಾಮರಾಜನಗರದಲ್ಲಿ ಬುಡಕಟ್ಟು ಗಿರಿಜನ ಮತ್ತು ಸೋಲಿಗರ ಅಭಿವೃದ್ದಿ ಸಂಘದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಮಹದೇಶ್ವರ ಬೆಟ್ಟ ವನ್ಯಜೀವಿಧಾಮವು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಣೆಯಾದರೆ ಕಾಡಿನಲ್ಲಿ ವಾಸವಾಗಿರುವ ಗಿರಿಜನರು ಮತ್ತು ಸೋಲಿಗರಿಗೆ ತೊಂದರೆಯಾಗುತ್ತದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತರಿಗೂ ತೊಂದರೆ ಆಗಲಿದೆ.
ಅಲ್ಲದೆ ಕರ್ನಾಟಕ ತಮಿಳುನಾಡಿನ ನಡುವೆ ಇರುವ ಸಂಪರ್ಕಕ್ಕೆ ಅಡ್ಡಿಯಾಗಬಹುದು. ಹಾಗಾಗಿ ಹುಲಿ ಸಂರಕ್ಷಿತ ಪ್ರದೇಶ ಘೋಷಣೆ ಮಾಡುವುದನ್ನು ಕೈ ಬಿಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.














