
ಚಾಮರಾಜನನಗರ(Chamarajanagara): ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ನಗರದಲ್ಲಿಂದು ಜಿಲ್ಲಾ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಎಸ್’ಡಿಪಿಐ, ಪಿಎಫ್ಐ ಸಂಘಟನೆಗಳನ್ನು ರದ್ದು ಮಾಡುವಂತೆ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕಠಿಣ ಕ್ರಮ ಸಾಕು, ಎನ್‌ಕೌಂಟರ್ ಬೇಕು ಎಂದು ಘೋಷಣೆಗಳನ್ನು ಕೂಗುತ್ತಾ ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದವರನ್ನು ಎನ್ ಕೌಂಟರ್ ಮಾಡುವಂತೆ ಒತ್ತಾಯಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.














