ಮೈಸೂರು: ನಗರಪಾಲಿಕೆ ಮಾಜಿ ಸದಸ್ಯ ಸುನಿಲ್ ಕುಮಾರ್ (30) ತಡ ರಾತ್ರಿ ಹೃದಯಾಘಾತದಿಂದ ಅಗ್ರಹಾರದ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಾಂಗ್ರೆಸ್ ನಿಂದ ರಾಜಕೀಯ ಜೀವನವನ್ನು ಆರಂಭಿಸಿದ್ದ ಸುನಿಲ್ ಪಾಲಿಕೆಗೆ ಆಯ್ಕೆಯಾಗಿದ್ದರು.
ಚಿಕ್ಕವಯಸ್ಸಿನಲ್ಲಿಯೇ ರಾಜಕೀಯಕ್ಕೆ ಪ್ರವೇಶ ಮಾಡಿ ಭರವಸೆ ಮೂಡಿಸಿದ್ದರು. ಕಳೆದ ಬಾರಿ ಚುನಾವಣೆಗೆ ಟಿಕೆಟ್ ಸಿಗದ ಕಾರಣ ಪಕ್ಷೇತರವಾಗಿ ಸ್ಪರ್ಧಿಸಿ ಸೋತ ಬಳಿಕ ರಾಜಕೀಯದಿಂದ ಅಂತರ ಕಂಡುಕೊಂಡಿದ್ದರು.