ಪಿರಿಯಾಪಟ್ಟಣ: ಪ್ರತಿಷ್ಟಿತ ಮೈಸೂರು ಮತ್ತು ಚಾಮರಾಜನಗರ ಸಹಕಾರ ಕೇಂದ್ರ(ಎಂಸಿಡಿಸಿಸಿ) ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ ಯಲ್ಲಿ ಪಿರಿಯಾಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಈಚೂರು ಲೋಕೇಶ್ ಭರ್ಜರಿ ಜಯಭೇರಿ ಬಾರಿಸಿದ್ದಾರೆ. ಹಾಲಿ ನಿರ್ದೆಶಕ ಸಿ.ಎನ್.ರವಿ ಪರಾಭವಗೊಂಡಿದ್ದಾರೆ.
ಮೈಸೂರು ಹಾಗೂ ಚಾಮರಾಜ ನಗರ ಜಿಲ್ಲೆಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಲ್ಲಿ ಪಿರಿಯಾಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಈ.ಪಿ.ಲೋಕೇಶ್ 18 ಮತಗಳು ಹಾಗೂ ಪ್ರತಿ ಸ್ಪರ್ಧಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಸಿ.ಎನ್.ರವಿ 08 ಮತಗಳನ್ನು ಪಡೆದುಕೊಂಡಿದ್ದರು.
ಚುನಾವಣೆಯಲ್ಲಿ ಜಯಗಳಿಸಿದ ಲೋಕೇಶ್ ರವರನ್ನು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ರವರು ಅಭಿನಂಧಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಸೀಗೂರು ವಿಜಯಕುಮಾರ್, ಈಚೂರು ದೇವರಾಜ್, ಕೆ.ಆರ್.ಮಹೇಶ್, ಗೋವಿಂದರಾಜು, ಕಾಂಟ್ರಾಕ್ಟರ್ ಕುಮಾರ್, ಜ್ಯೋತಿ ಕುಮಾರ್, ತಮ್ಮಡಹಳ್ಳಿ ಮೋಹದೇಶ್, ಹರೀಶ್, ದಿನೇಶ್ ಸತೀಶ್ ಸೇರಿದಂತೆ ಮತ್ತಿತರರು ಅಭಿನಂದಿಸಿದರು.














