ಮೈಸೂರು: ದೇವರಾಜ ಅರಸು ಅವರು ನಮ್ಮ ಮೈಸೂರು ಜಿಲ್ಲೆಯವರಾಗಿದ್ದು, ಆದರ್ಶ ವ್ಯಕ್ತಿಯಾಗಿ ಮಾದರಿಯಾಗಿದ್ದರು ಅವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಅದ್ದೂರಿಯಾಗಿ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ. ಶಿವರಾಜು ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಆಗಸ್ಟ್ ೨೦ ರಂದು ಬೆಳಗ್ಗೆ ೧೦.೩೦ ಗಂಟೆಗೆ ಕರ್ನಾಟಕ ಕಲಾ ಮಂದಿರದಲ್ಲಿ ಆಚರಿಸಲಾಗುವುದು. ದೇವರಾಜ ಅರಸು ಅವರು ರಾಜ್ಯಕ್ಕೆ ಮಾದರಿ ವ್ಯಕ್ತಿಯಾಗಿದ್ದರು. ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವಾರು ಸುಧಾರಣೆಗಳನ್ನು ಜಾರಿಗೆ ತಂದರು. ಅವರ ಆದರ್ಶಗಳನ್ನು ಪ್ರತಿಯೊಬ್ಬರು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ, ಹಾಸ್ಟೆಲ್‌ಗಳಲ್ಲಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಆಚರಣೆ ಮಾಡಬೇಕು. ಮಕ್ಕಳಿಗೆ ಚರ್ಚಾ ಸ್ಪರ್ಧೆ, ಆಶುಭಾ?ಣ ಸ್ಪರ್ಧೆ, ರಸಪ್ರಶ್ನೆ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಬೇಕು. ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದವರಿಗೆ ಬಹುಮಾನ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.
ಕಲಾಮಂದಿರದ ಆವರಣದ ಸ್ವಚ್ಛತೆ ಹಾಗೂ ಶಾಮಿಯಾನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಮಾಡಬೇಕು. ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ ಸುದರ್ಶನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ.ಹರೀಶ್, ದೇವರಾಜ ಅರಸು ಪ್ರತಿಮೆ ಪ್ರತಿ?ಪನಾ ಸಮಿತಿ ಗೌರವ ಅಧ್ಯಕ್ಷರಾದ ಎಂ. ಚಂದ್ರಶೇಖರ್, ಅಧ್ಯಕ್ಷರಾದ ಜಾಕೀರ್ ಹುಸೇನ್, ಪ್ರಧಾನ ಸಂಚಾಲಕರಾದ ಡೈರಿ ವೆಂಕಟೇಶ್, ಅಖಿಲ ಭಾರತ ವೀರಶೈವ ಮಹಾಸಭಾದ ಮೈಸೂರು ಜಿಲ್ಲಾ ನಿರ್ದೇಶಕ ರಾದ ಎಂ. ?ಡಕ್ಷರಿ (ಕೆಎಸ್‌ಆರ್‌ಟಿಸಿ), ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.














