ಮೈಸೂರು (Mysuru): ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಜೂನ್ 23 ರಂದು ಜನಸಂಪರ್ಕ ಸಭೆ ಇದ್ದು, ವಿದ್ಯುತ್ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಸಭೆಯಲ್ಲಿ ತಿಳಿಸಬಹುದಾಗಿದೆ.
ಜೂ.23 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಶ್ರೀ ಹರ್ಷ ರಸ್ತೆಯಲ್ಲಿರುವ ಕೇಂದ್ರ ಉಪವಿಭಾಗ ಕಚೇರಿ, ಮಧ್ಯಾಹ್ನ 3 ಗಂಟೆಗೆ ಹೆಚ್.ಡಿ. ಕೋಟೆ-ಮಾನಂದವಾಡಿ ರಸ್ತೆಯಲ್ಲಿರುವ ಚಾಮುಂಡಿಪುರಂ ಉಪವಿಭಾಗ ಕಚೇರಿಗೆಯಲ್ಲಿ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ.
ನ.ರಾ.ಮೊಹಲ್ಲಾ ವಿಭಾಗ ವ್ಯಾಪ್ತಿಯ ಉಪವಿಭಾಗಗಳಾದ ಕೇಂದ್ರ ಮತ್ತು ಚಾಮುಂಡಿಪುರಂ ಉಪವಿಭಾಗಳ ವ್ಯಾಪ್ತಿಯಲ್ಲಿರುವ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ಲಿಖಿತ ಅರ್ಜಿಗಳನ್ನು ಸಲ್ಲಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.