ಮನೆ ಸುದ್ದಿ ಜಾಲ ಎಸ್.ಸಿ.ಪಿ, ಟಿ.ಎಸ್.ಪಿ ಕಾಯ್ದೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಷ್ಟ್ರೀಯ ಆಯೋಗದ ಸದಸ್ಯೆ

ಎಸ್.ಸಿ.ಪಿ, ಟಿ.ಎಸ್.ಪಿ ಕಾಯ್ದೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಷ್ಟ್ರೀಯ ಆಯೋಗದ ಸದಸ್ಯೆ

0

ಮೈಸೂರು: ಕರ್ನಾಟಕ ಅನುಸೂಚಿತ ಜಾತಿಗಳ ಉಪಹಂಚಿಕೆ ಮತ್ತು ಬುಡಕಟ್ಟು ಉಪಹಂಚಿಕೆ ಅಧಿನಿಯಮ-2013ರ ಬಗ್ಗೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ ಸದಸ್ಯರಾದ ಡಾ. ಅಂಜು ಬಾಲ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸೋಮವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಈ ಅಧಿನಿಯಮದ ಅನ್ವಯ ಕರ್ನಾಟಕ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಯೋಜನಾ ವೆಚ್ಚದಲ್ಲಿ ಅನುದಾನ ಒದಗಿಸಿ, ಅನುಷ್ಟಾನಗೊಳಿಸುತ್ತಿರುವ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮೈಸೂರು ಜಿಲ್ಲೆಯಲ್ಲಿ ದಾಖಲಾಗುತ್ತಿರುವ ದೌರ್ಜನ್ಯ ಪ್ರಕರಣಗಳ ಬಗ್ಗೆ ಪರಿಶೀಲಿಸಿದರು. ದೌರ್ಜಲ್ಯಕ್ಕೆ ಒಳಗಾದ ಕುಟುಂಬಗಳಿಗೆ ತಕ್ಷಣವೇ ಪರಿಹಾರದ ಮೊತ್ತ ಪಾವತಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಈ ವರೆಗೆ 2.2 ಕೋಟಿ ರೂ. ಪರಿಹಾರ ಮೊತ್ತವನ್ನು ಪಾವತಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಬಿ. ಮಾಲತಿ ಅವರು ತಿಳಿಸಿದರು.

ದೌರ್ಜನ್ಯದ ಬಗ್ಗೆ ದೂರ ಬಂದ ಕೂಡಲೇ ತಡಮಾಡದೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು. ಇಂತಹ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆ ಇರುವುದನ್ನು ಗಮನಿಸಿದ ಆಯೋಗದ ಸದಸ್ಯರು ಶಿಕ್ಷೆಯ ಪ್ರಮಾಣ ಹೆಚ್ಚಾಗಬೇಕು ಹೇಳಿದರು.

ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ ಅವರು ಮಾತನಾಡಿ, ದೂರುಗಳು ಬಂದ ತಕ್ಷಣ ದಾಖಲಿಸಿಕೊಂಡು ಪ್ರಕರಣಗಳನ್ನು ಕೈಗೊಳ್ಳುತ್ತಿದ್ದು, ಈ ವಿಚಾರದಲ್ಲಿ ಯಾವುದೇ ವಿಳಂಬವಾಗುತ್ತಿಲ್ಲ. ಪ್ರತಿ ತಿಂಗಳು ಪರಿಶಿಷ್ಟ ಜಾತಿಯವರ ಅಹವಾಲು ಸ್ವೀಕರಿಸುವ ಸಲುವಾಗಿ ಸಭೆಯನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಡಾ. ಅಂಜು ಬಾಲ ಅವರು ಮಾತನಾಡಿ, ದೌರ್ಜನ್ಯ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ಪರಿಹಾರ ಸಿಗುತ್ತಿರುವುದು ಹಾಗೂ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಸುವ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಭೆಯನ್ನು ನಡೆಸುತ್ತಿರುವುದು ಇತರೆ ರಾಜ್ಯಗಳಿಗೆ ಹೋಲಿಸಿದರೆ ಇಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಶಾಲೆಗೆ ಸೇರಿರುವ ಮಕ್ಕಳ ಅಂಕಿ ಅಂಶಗಳನ್ನು ಪರಿಶೀಲಿಸಿದ ಅವರು ಪರಿಶಿಷ್ಟ ಜಾತಿಯ ಜನಸಂಖ್ಯೆಗೆ ಅನುಗುಣವಾಗಿ ಶಾಲೆಗೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆ ಸಮಾಧಾನಕರವಾಗಿದೆ ಎಂದರು. ಈ ಸಾಲಿನಲ್ಲಿ 13 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು, ಆ ಮಕ್ಕಳನ್ನು ಮರಳಿ ಶಾಲೆಗೆ ಸೇರುವಂತೆ ಮಾಡಬೇಕು ಎಂದು ಹೇಳಿದರು.

ಸಭೆಯಲ್ಲಿ ರಾಷ್ಟಿçÃಯ ಪರಿಶಿಷ್ಟ ಜಾತಿಗಳ ಆಯೋಗದ ನಿರ್ದೇಶಕರಾದ ಎಸ್.ಕೆ.ಸಿಂಗ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಜಿಲ್ಲಾ ಪಂಚಾಯಿತಿಯ ಸಿಇಒ ಎ.ಎಂ.ಯೋಗೀಶ್, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಆರ್.ಚೇತನ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಮಾಲತಿ ಸೇರಿದಂತೆ ಇತರ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಹಿಂದಿನ ಲೇಖನಅಸ್ವಸ್ಥಗೊಂಡಿದ್ದ ಕಾಡಾನೆ ಸಾವು
ಮುಂದಿನ ಲೇಖನಆಸ್ತಿಗಾಗಿ ತಂದೆಯನ್ನೇ ಶೂಟ್ ಮಾಡಿದ ಮಗ