ಬೆಂಗಳೂರು : ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನ ಋತುಚಕ್ರ ರಜೆ ನೀಡಿದ್ದ, ಸರ್ಕಾರದ ಆದೇಶಕ್ಕೆ ಇದೀಗ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಸರ್ಕಾರದ ಮಹತ್ವದ ಆದೇಶ ಪ್ರಶ್ನಿಸಿ ಹೋಟೆಲ್ ಅಸೋಸಿಯೇಷನ್ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಅವಕಾಶ ನೀಡಿದೆ. ಚಳಿಗಾಲದ ರಜೆ ಮುಗಿದ ಬಳಿಕ ಆಕ್ಷೇಪಣೆ ಸಲ್ಲಿಸುವಂತೆ ತಿಳಿಸಿ, ಮಧ್ಯಂತರ ತಡೆ ನೀಡಿದೆ.
2025ರ ನ.20ರಂದು ರಾಜ್ಯ ಸರ್ಕಾರವು ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಋತುಚಕ್ರ ರಜೆ ನೀಡಬೇಕು. ತಿಂಗಳಲ್ಲಿ ಒಂದು ದಿನ ವೇತನ ಸಹಿತ ರಜೆ ನೀಡಬೇಕು ಎಂದು ಆದೇಶಿಸಿತ್ತು. ಜೊತೆಗೆ ಷರತ್ತುಗಳನ್ನ ವಿಧಿಸಿ ರಜೆ ನೀಡಲು ಸಂಸ್ಥೆಗಳಿಗೆ ಸೂಚಿಸಿತ್ತು ಎನ್ನಲಾಗಿದೆ.














