ಬೆಂಗಳೂರು(Bengaluru): ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ಪದವಿ ಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯನ್ನು ವಿಲೀನಗೊಳಿಸುವ ಸಂಬಂಧ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (ತಿದ್ದುಪಡಿ) ವಿಧೇಯಕವನ್ನು ಧ್ವನಿಮತದ ಮೂಲಕ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ವಿಧೇಯಕವನ್ನು ಮಂಡಿಸಿ, ಅದರ ಉದ್ದೇಶಗಳನ್ನು ವಿವರಿಸಿ ಅಂಗೀಕಾರ ಪಡೆದುಕೊಂಡರು.
ನಂತರ ಮಾತನಾಡಿದ ಅವರು, ದೇಶದ ಕೆಲವು ರಾಜ್ಯಗಳಲ್ಲಿ 10, 11 ಮತ್ತು 12ನೇ ತರಗತಿ ಪ್ರತ್ಯೇಕವಾಗಿಲ್ಲ. ಆದರೆ, ನಮ್ಮ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪ್ರತ್ಯೇಕವಾಗಿದೆ. ಈಗ ಎರಡನ್ನು ವಿಲೀನಗೊಳಿಸಲಾಗುತ್ತಿದೆ. ಎನ್‌ಇಪಿ ಅನ್ವಯ ನಾಲ್ಕು ಹಂತದಲ್ಲಿ ಶೈಕ್ಷಣಿಕವನ್ನು ವಿಭಾಗಿಸಲಾಗಿದೆ. ಎಲ್‌ಕೆಜಿಯಿಂದ ಎರಡನೇ ತರಗತಿ, ಮೂರನೇ ತರಗತಿಯಿಂದ ಐದನೇ ತರಗತಿ, ಆರನೇ ತರಗತಿಯಿಂದ ಎಂಟನೇ ತರಗತಿ ಮತ್ತು ಒಂಬತ್ತನೇ ತರಗತಿಯಿಂದ 12ನೇ ತರಗತಿಯವರೆಗೆ ವಿಭಾಗಿಸಲಾಗಿದೆ.
ಪ್ರಸ್ತುತ ನಡೆಯುತ್ತಿರುವ ಪಬ್ಲಿಕ್ ಪರೀಕ್ಷೆಯನ್ನು ಯಥಾಸ್ಥಿತಿಯಲ್ಲಿಯೇ ನಡೆಸಲಾಗುತ್ತದೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಗೆ ಪ್ರತ್ಯೇಕವಾಗಿ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ