Saval TV on YouTube
ಬೆಂಗಳೂರು(Bengaluru): ಮೆಟ್ರೊ 2ನೇ ಹಂತದ ಕಾಮಗಾರಿ ನಡೆಯುತ್ತಿದ್ದ ನಾಗವಾರ ಬಳಿ ಪಿಲ್ಲರ್ ಕುಸಿದು ತಾಯಿ-ಮಗು ಮೃತಪಟ್ಟಿದ್ದಾರೆ.
ತೇಜಸ್ವಿನಿ (23) ಹಾಗೂ ಅವರ ಎರಡೂವರೆ ವರ್ಷದ ಮಗು ಮೃತ ಪಟ್ಟವರು.
ನಾಗವಾರ – ಗೊಟ್ಟಿಗೆರೆ ಮಾರ್ಗದಲ್ಲಿ ಮೆಟ್ರೋ ಮಾರ್ಗ ಕಾಮಗಾರಿ ನಡೆಯುತ್ತಿತ್ತು. ನಾಗವಾರ ಬಳಿ (ಹೆಣ್ಣೂರು ಕ್ರಾಸ್) ಮೆಟ್ರೋ ಪಿಲ್ಲರ್ ನೆಲಕ್ಕೆ ಉರುಳಿ ಅವಘಡ ಸಂಭವಿಸಿದೆ.
ಮಂಗಳವಾರ ಬೆಳಿಗ್ಗೆ 10.30 ಸುಮಾರಿಗೆ ಮೆಟ್ರೋ ಪಿಲ್ಲರ್ ಕುಸಿತವಾಗಿದೆ. ಗಾಯಗೊಂಡಿದ್ದ ತಾಯಿ-ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.
ಮೃತ ತೇಜಸ್ವಿನಿ ಅವರು ಪತಿ ಹಾಗೂ ತನ್ನಿಬ್ಬರು ಅವಳಿ ಮಕ್ಕಳ ಜೊತೆಯಲ್ಲಿ ಬೈಕ್’ನಲ್ಲಿ ಹೊರಟಿದ್ದರು. ಈ ವೇಳೆ ಪಿಲ್ಲರ್ ಅವರ ಬೈಕ್ ಮೇಲೆ ಬಿದ್ದಿತ್ತು. ಈ ವೇಳೆ ತೇಜಸ್ವಿನಿ ಹಾಗೂ ಮಗು ವಿಹಾನ್ ಮೃತಟ್ಟಿದ್ದಾರೆ ಎಂದು ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ ತಿಳಿಸಿದರು.