ಮನೆ ರಾಜಕೀಯ ರಸ್ತೆ ಡಾಂಬರಿಗಿಂತ ರಾಗಿ ಹಿಟ್ಟೇ ಹೆಚ್ಚು ಸ್ಟ್ರಾಂಗ್: ಕಾಂಗ್ರೆಸ್ ವ್ಯಂಗ್ಯ

ರಸ್ತೆ ಡಾಂಬರಿಗಿಂತ ರಾಗಿ ಹಿಟ್ಟೇ ಹೆಚ್ಚು ಸ್ಟ್ರಾಂಗ್: ಕಾಂಗ್ರೆಸ್ ವ್ಯಂಗ್ಯ

0

ಬೆಂಗಳೂರು(Bengaluru): ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಾಕಿರುವ ರಸ್ತೆ ಡಾಂಬಾರಿಗಿಂತ ಅಡುಗೆ ಮನೆಯಲ್ಲಿ ರೊಟ್ಟಿಗೆ ಕಲಸುವ ರಾಗಿ ಹಿಟ್ಟೇ ಹೆಚ್ಚು ಸ್ಟ್ರಾಂಗ್ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ರಸ್ತೆಗಳು ಕೊಚ್ಚಿಕೊಂಡು ಹೋಗಿರುವುದರ ಬಗ್ಗೆ ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್‌ ತರಾಟೆಗೆ ತೆಗೆದುಕೊಂಡಿದೆ.

ಬಿಜೆಪಿ ಸರ್ಕಾರದ ಅಭಿವೃದ್ಧಿ ವಿಚಾರಗಳನ್ನು ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್‌, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದೆ.

ಬಸವರಾಜ ಮೊಮ್ಮಾಯಿ ಅವರೇ, ನಿಮ್ಮ ಸರ್ಕಾರದ ಶೇ 40ರಷ್ಟು ಕಮಿಷನ್ ಲೂಟಿಗೆ ಇನ್ಯಾವ ಸಾಕ್ಷಿ ಬೇಕು, ಇದೇ ರಸ್ತೆಯ ಮೇಲೆ ಬಂದು ಡಬಲ್ ಇಂಜಿನ್ ಅಭಿವೃದ್ಧಿಯಾಗುತ್ತದೆ ಎಂದು ಭಾಷಣ ಮಾಡಿದ್ದ ಪ್ರಧಾನಿ ಮೋದಿ ಅವರೇ, ಈ ಲೂಟಿ ತನಿಖೆಗೆ ಅರ್ಹವಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಹಿಂದಿನ ಲೇಖನನವೆಂಬರ್ 11ಕ್ಕೆ ತೆರೆ ಕಾಣಲಿರುವ `ರಾಣಾ’ ಚಿತ್ರ
ಮುಂದಿನ ಲೇಖನಐಸಿಸಿ ಟಿ20 ಕ್ರಿಕೆಟ್ ರ್ಯಾಂಕಿಂಗ್:  13ನೇ ಸ್ಥಾನಕ್ಕೇರಿದ ರೇಣುಕಾ ಸಿಂಗ್