ಮನೆ ರಾಷ್ಟ್ರೀಯ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸರ್ಕಾರ

ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸರ್ಕಾರ

0

ನವದೆಹಲಿ: ಕೊಬ್ಬರಿಗೆ ನೀಡಲಾಗುತ್ತಿರುವ ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ಶುಕ್ರವಾರ ಹೆಚ್ಚಿಸಿದೆ. ಈ ಮೂಲಕ ದೇಶದಲ್ಲಿ ಕೊಬ್ಬರಿ ಉತ್ಪಾದನೆಯಲ್ಲಿ ನಂಬರ್‌ 1 ಸ್ಥಾನ ಪಡೆದಿರುವ ಕರ್ನಾಟಕದ ರೈತರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ.

Join Our Whatsapp Group

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿ‌ನಿ ವೈಷ್ಣವ್‌ ಈ ಬಗ್ಗೆ ಮಾಹಿತಿ ನೀಡಿದ್ದು, ಹೋಳಾದ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ ಪ್ರತಿ ಕ್ವಿಂಟಲ್‌ಗೆ 422ರೂ. ಹೆಚ್ಚಿಸಲಾಗಿದ್ದು, ಉಂಡೆ ಕೊಬ್ಬರಿಯ ಬೆಲೆಯನ್ನು 100 ರೂ. ಹೆಚ್ಚಿಸಲಾಗಿದೆ. ಈ ಮೂಲಕ 2025ನೇ ಸಾಲಿನಲ್ಲಿ 1 ಕ್ವಿಂಟಲ್‌ ಹೋಳು ಕೊಬ್ಬರಿ (ಮಿಲ್ಲಿಂಗ್‌ ಕೊಬ್ಬರಿ) ಬೆಲೆ 12,100 ರೂ. ಹಾಗೂ, 1 ಕ್ವಿಂಟಲ್‌ ಉಂಡೆ ಕೊಬ್ಬರಿ ಬೆಲೆ 12,100ರೂ. ಗಳಿಗೆ ಏರಿಕೆಯಾಗಲಿದೆ ಎಂದಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದ ಸಂಪುಟ ಸಮಿತಿಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಇದರಿಂದ ಕೇಂದ್ರದ ಬೊಕ್ಕಸಕ್ಕೆ 855 ಕೋಟಿ ರೂ. ವೆಚ್ಚವಾಗಲಿದೆ ಎಂದೂ ತಿಳಿಸಿದ್ದಾರೆ.

ಇನ್ನು ದೇಶದಲ್ಲಿ ಅತಿಹೆಚ್ಚು ಕೊಬ್ಬರಿ ಉತ್ಪಾದಿಸುವ ರಾಜ್ಯಗಳ ಪೈಕಿ ಕರ್ನಾಟಕಕ್ಕೆ ಮೊದಲ ಸ್ಥಾನವಿದ್ದು, ಶೇ.32.7ರಷ್ಟು ಕೊಬ್ಬರಿ ಕರ್ನಾಟಕದಲ್ಲಿ ಉತ್ಪಾದಿಸಲಾಗುತ್ತಿದೆ. ತಮಿಳುನಾಡು ಶೇ.25.7ರಷ್ಟು ಪಾಲಿನೊಂದಿಗೆ 2ನೇ ಸ್ಥಾನದಲ್ಲಿದ್ದರೆ, ಕೇರಳ ಶೇ.25.4ರಷ್ಟು ಕೊಬ್ಬರಿ ಉತ್ಪಾದಿಸುತ್ತಿದೆ.