ಮನೆ ರಾಜಕೀಯ ಶಾಲಾ ಮಕ್ಕಳಿಗೆ ಧಾನ್ಯ ವಿತರಣಾ ದಾಸ್ತಾನು ಗೋದಾಮಿಗೆ ಸಚಿವ ಕೆ.ಗೋಪಾಲಯ್ಯ ಭೇಟಿ, ಪರಿಶೀಲನೆ

ಶಾಲಾ ಮಕ್ಕಳಿಗೆ ಧಾನ್ಯ ವಿತರಣಾ ದಾಸ್ತಾನು ಗೋದಾಮಿಗೆ ಸಚಿವ ಕೆ.ಗೋಪಾಲಯ್ಯ ಭೇಟಿ, ಪರಿಶೀಲನೆ

0

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದಲ್ಲಿರುವ ಸರ್ಕಾರಿ ಶಾಲಾ ಮಕ್ಕಳಿಗೆ ಅಕ್ಕಿ, ಅಡುಗೆ ಎಣ್ಣೆ ಪ್ಯಾಕಿಂಗ್ ಮಾಡುವ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ದಾಸ್ತಾನು ಗೋದಾಮಿಗೆ ಇಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಇಂದು ಬೆಳಿಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಪ್ರತಿ ತಿಂಗಳು ಬರುವ ದಾಸ್ತಾನು ಮತ್ತು ವಿತರಣೆ ಕುರಿತು ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಪ್ಯಾಕಿಂಗ್ ಮತ್ತು ವಿತರಣೆಯಲ್ಲಿ ಎಲ್ಲಿಯೂ ಲೋಪವಾಗದಂತೆ ನೋಡಿಕೊಳ್ಳಬೇಕೆಂದು ಸೂಚಿಸಿದರು. ಈ ಸಂದರ್ಭದಲ್ಲಿ ಅಕ್ಕಿ, ಬೇಳೆಯ ಚೀಲಗಳನ್ನು ಬಿಚ್ಚಿಸಿ ಧಾನ್ಯಗಳ ಗುಣಮಟ್ಟ ಪರಿಶೀಲಿಸಿದ ಸಚಿವರು,ವಿತರಣೆಯಲ್ಲಿ ಯಾರಿಂದಲೂ ದೂರು ಬಾರದಂತೆ ನಿಗಾವಹಿಸಬೇಕೆಂದು ತಾಕೀತು ಮಾಡಿದರು.

ಈ ಸಂದರ್ಭದಲ್ಲಿ ಚನ್ನರಾಯಪಟ್ಟಣ ಶಾಸಕ ಬಾಲಕೃಷ್ಣ, ಹಾಸನ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾಂತರಾಜ್ ಹಾಗೂ ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು.

ಹಿಂದಿನ ಲೇಖನಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ
ಮುಂದಿನ ಲೇಖನನಿಮ್ಮ ತಾತ ಕೂಡ ಹಿಂದೂ ಆಗಿದ್ದರು; ತನ್ವೀರ್‌ ಸೇಠ್‌ಗೆ ಪ್ರತಾಪ್‌ ಸಿಂಹ ಟಾಂಗ್