ಬೆಂಗಳೂರು(Bengaluru): ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿಂದು ಮುಸ್ಲಿಂ ಸಮಾಜ ಬಾಂಧವರು ಪವಿತ್ರ ರಂಜಾನ್ ಹಬ್ಬವನ್ನು ಶ್ರದ್ದೆ ಭಕ್ತಿಯಿಂದ ಆಚರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ರಾಜೀವ್ ಗಾಂಧಿ ಬಡಾವಣೆಯಲ್ಲಿರುವ ಇಲಾಹಿ- ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಥಳೀಯ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಭಾಗವಹಿಸಿ ಸಮಾಜ ಬಾಂಧವರಿಗೆ ಶುಭ ಕೋರಿದರು.
ಇಲಾಹಿ ಈದ್ಗಾ ಚಾರಿಟಬಲ್ ಟ್ರಸ್ಟ್ ನಿಂದ ಆಯೋಜಿಸಿದ್ದ ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಕಂಠೀರವ ನಗರ,ನಂಜುಂಡೇಶ್ವರ ನಗರ, ವಿಜಯಾನಂದ ನಗರ,ಕೃಷ್ಣಾನಂದ ನಗರದ ಸಾವಿರಾರು ಮುಸ್ಲಿಂ ಬಾಂಧವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ನೆ.ಲ.ನರೇಂದ್ರ ಬಾಬು, ಬಿಬಿಎಂಪಿ ಮಾಜಿ ಸದಸ್ಯರಾದ ಎಂ.ಮಹದೇವ್, ರಾಜೇಂದ್ತಕುಮಾರ್, ಮುಸ್ಲಿಂ ಸಮಾಜದ ಮುಖಂಡರಾದ ಸಾಧಿಕ್, ಖರೀಬುಲ್ಲಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಸಾಮೂಹಿಕ ಪ್ರಾರ್ಥನೆ ನಂತರ ಸಮಾಜ ಬಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.















