ಮನೆ ರಾಜಕೀಯ ಲೋಕಾಯುಕ್ತವನ್ನು ಬುಡಮೇಲು ಮಾಡಿದವರು ಸಿದ್ದರಾಮಯ್ಯ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಲೋಕಾಯುಕ್ತವನ್ನು ಬುಡಮೇಲು ಮಾಡಿದವರು ಸಿದ್ದರಾಮಯ್ಯ: ಸಚಿವ ಕೋಟ ಶ್ರೀನಿವಾಸ ಪೂಜಾರಿ

0

ಬೆಂಗಳೂರು (Bengaluru)-ಲೋಕಾಯುಕ್ತವನ್ನು ಬುಡಮೇಲು ಮಾಡಿದವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಆರೋಪಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಲೋಕಾಯುಕ್ತವನ್ನು ಬುಡಮೇಲು ಮಾಡಿ ಎಸಿಬಿಯನ್ನು ಸ್ಥಾಪಿಸಿದರು ಎಂದು ಆಪಾದಿಸಿ ಸಿದ್ದರಾಮಯ್ಯನವರೇ ನಿಮ್ಮ ಅವಧಿಯಲ್ಲಿ ಆದ ಎಷ್ಟು ಅಕ್ರಮಗಳ ತನಿಖೆ ಮಾಡಿದ್ದೀರಿ’ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದವರ ಅಪಪ್ರಚಾರದ ಹೊರತಾಗಿಯೂ ರಾಜ್ಯದಲ್ಲಿರುವ ದಲಿತರು, ಹಿಂದುಳಿದವರು ಮತ್ತು ಪರಿಶಿಷ್ಟ ಜಾತಿ, ಪಂಗಡದವರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಇದರಿಂದ ಹತಾಶರಾಗಿರುವ ಕಾಂಗ್ರೆಸ್‍ನವರು ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಪಿಎಸ್‍ಐ ನೇಮಕಾತಿ ಅಕ್ರಮ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ದೋಷಿಗಳು ಮತ್ತು ನಿರ್ದೋಷಿಗಳನ್ನು ತನಿಖಾ ಸಂಸ್ಥೆಗಳು ನಿರ್ಧರಿಸುತ್ತವೆ ಎಂದರು.

ಹಿಂದಿನ ಲೇಖನರೀಪ್ ಬೆನಿಫಿಟ್ ಫೌಂಡೇಶನ್ ಜೊತೆ ಮೈಸೂರು ವಿವಿ ಒಪ್ಪಂದ
ಮುಂದಿನ ಲೇಖನಆರೋಪಿಸುವವರು ಮಾಹಿತಿ ಕೊಟ್ಟರೆ ತನಿಖೆ ಸಮರ್ಪಕವಾಗಿ ನಡೆಯಲಿದೆ: ಎಸ್.ಟಿ.ಸೋಮಶೇಖರ್‌