ಮನೆ ಅಪರಾಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ : ಆಕ್ಸಿಡೆಂಟ್ ಮಾಡಿದ ಲಾರಿ ಚಾಲಕ ಬಂಧನ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ : ಆಕ್ಸಿಡೆಂಟ್ ಮಾಡಿದ ಲಾರಿ ಚಾಲಕ ಬಂಧನ

0

ಬೆಳಗಾವಿ : ಕಳೆದ ಜನವರಿ 14 ರಂದು ಕಿತ್ತೂರು ಬಳಿ ಅಂಬಡಗಟ್ಟಿ ಕ್ರಾಸ್‌ನಲ್ಲಿ ಸಂಭವಿಸಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಪಘಾತಕ್ಕೆ ಕಾರಣನಾಗಿದ್ದ ಟ್ರಕ್ ಚಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಲಾರಿ ಚಾಲಕನನ್ನು ಮಧುಕರ ಕೊಂಡಿರಾಮ ಸೋಮವಂಶಿ ಎಂದು ತಿಳಿದುಬಂದಿದೆ.

ಪ್ರಕರಣದ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಚಾಲಕ‌ ಕಿತ್ತೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು.‌ ಫೋನ್ ಕರೆ ಹಾಗೂ ಸಿಸಿಟಿವಿಯಲ್ಲಿ ದಾಖಲಾದ ದೃಶ್ಯ ಸೇರಿ ಹಲವು ಸಾಕ್ಷ್ಯಗಳ ಆಧಾರದ ಮೇಲೆ ಮಹಾರಾಷ್ಟ್ರದ ತಕ್ರಾರವಾಡಿ ಗ್ರಾಮದ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ‌ಪಡೆಯಲಾಗಿದೆ ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೆದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಕರಣ ಹಿನ್ನೆಲೆ

ಜ.14ರಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಗಂಭೀರ ಗಾಯಗಳಾಗಿದ್ದರಿಂದ ಸಚಿವೆ ಆಸ್ಪತ್ರೆಗೆ ದಾಖಲಾಗಿದ್ದರು. ಸುಮಾರು 13 ದಿನ ಚಿಕಿತ್ಸೆ ಪಡೆದ ಬಳಿಕ ಹೆಬ್ಬಾಳ್ಕರ್‌ ಅವರು ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದರು.