ಮನೆ ರಾಜ್ಯ ಕಾಲ್ತುಳಿತ ಪ್ರಕರಣ ಮೃತರ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್...

ಕಾಲ್ತುಳಿತ ಪ್ರಕರಣ ಮೃತರ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಗ್ರಹ

0

ಬೆಳಗಾವಿ: ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಹಿನ್ನೆಲೆ, ಮೃತರ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕೆಂದು ಜಲ ಸಂಪತ್ತು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಗ್ರಹಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವೆ, “ಇದೊಂದು ಅತ್ಯಂತ ದುಃಖದ ಘಟನೆ. ಸರಕಾರ ಈಗಾಗಲೇ ಪರಿಹಾರ ಘೋಷಿಸಿದೆ, ಆದರೆ ನಾನು ಸರ್ಕಾರವನ್ನು ಇನ್ನಷ್ಟು ಪರಿಹಾರ ನೀಡಲು ಒತ್ತಾಯಿಸುತ್ತೇನೆ. ಜೊತೆಗೆ ಆರ್‌ಸಿಬಿ ಫ್ರಾಂಚೈಸಿ ಮತ್ತು ಕರ್ನಾಟಕ ಕ್ರಿಕೆಟ್ ಅಸೋಸಿಯೇಶನ್ (ಕೆಎಸ್‌ಸಿಎ) ಕೂಡ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಜನರನ್ನು ಕಳೆದುಕೊಂಡ ಕುಟುಂಬಗಳಿಗೆ ಕೇವಲ ₹10 ಲಕ್ಷ ಸಾಕಾಗಲ್ಲ, ತಲಾ ₹1 ಕೋಟಿ ನೀಡಬೇಕೆಂಬುದೇ ನನ್ನ ಅಭಿಪ್ರಾಯ” ಎಂದು ಹೇಳಿದ್ದಾರೆ.

ಇದೇ ವೇಳೆ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಸಚಿವೆ, “ವಿಪಕ್ಷದವರು ಜನರ ದಿಕ್ಕು ತಪ್ಪಿಸಲು ಏನು ಬೇಕಾದರೂ ಮಾಡುತ್ತಾರೆ. ಆದರೆ ನಾವು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ. ಘಟನೆಯ ನಿಖರ ಸತ್ಯ ತಿಳಿಯಲು ತನಿಖೆ ನಡೆಯುತ್ತಿದೆ. ಇಂಟಲಿಜೆನ್ಸ್ ನಿಂದ ತಪ್ಪಾಗಿದೆಯಾ ಎನ್ನುವುದೂ ತನಿಖೆಯಿಂದ ತಿಳಿಯುತ್ತದೆ” ಎಂದು ಸ್ಪಷ್ಟಪಡಿಸಿದರು.