ಮನೆ ಅಪರಾಧ ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಕೆಎಸ್ ​ಆರ್ ​​ಟಿಸಿ ಬಸ್...

ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಕೆಎಸ್ ​ಆರ್ ​​ಟಿಸಿ ಬಸ್ ಚಾಲಕ

0

ಮಂಡ್ಯ: ರಾಜಕೀಯ ದ್ವೇಷದಿಂದ ವರ್ಗಾವಣೆ ಮಾಡಿದ್ದಾರೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿ ಕೆಎಸ್ ​ಆರ್ ​​ಟಿಸಿ ಬಸ್ ಚಾಲಕ ಜಗದೀಶ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಾಗಮಂಗಲ ಡಿಪೋ ಎದುರು ಇಂದು ನಡೆದಿದೆ.

Join Our Whatsapp Group

ಅಸ್ವಸ್ಥಗೊಂಡಿರುವ ಜಗದೀಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವರ್ಗಾವಣೆಯಿಂದ ಬೇಸತ್ತು ಚಾಲಕ ಜಗದೀಶ್​ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಚುನಾವಣೆಯಲ್ಲಿ ಜೆಡಿಎಸ್ ಪರ ಕೆಲಸ ಮಾಡಿದ್ದಕ್ಕೆ ವರ್ಗಾವಣೆ ಮಾಡಲಾಗಿದೆ. ರಾಜಕೀಯ ದ್ವೇಷದಿಂದ ವರ್ಗಾವಣೆ ಮಾಡಿದ್ದಾರೆಂದು ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಜಗದೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಪೋ ಬಳಿ ಸಚಿವರ ವಿರುದ್ಧ ಬಾಯಿಗೆ ಬಂದಂತೆ ಬೈದ ಜಗದೀಶ್, ನಂತರ ವಿಷ ಸೇವಿಸಿದ್ದಾರೆ.

ತಕ್ಷಣವೇ ಅವರನ್ನು ನಾಗಮಂಗಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ಜಗದೀಶ್ ಅವರ ವರ್ಗಾವಣೆಗೆ ಬೇರೆಯೇ ಕಾರಣವಿದೆ ಎಂದು ಡಿಪೋ ಮ್ಯಾನೇಜರ್​ ಹೇಳಿದ್ದಾರೆ. ನಿರ್ವಾಹಕಿ ಜೊತೆ ಜಗದೀಶ್​ ಅನುಚಿತ ವರ್ತನೆ ತೋರಿದ್ದಾರೆ ಎಂಬ ದೂರು ಬಂದಿತ್ತು. ಈ ದೂರಿನನ್ವಯ ಮದ್ದೂರು ಡಿಪೋಗೆ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಡಿಪೋ ಮ್ಯಾನೇಜರ್ ತಿಳಿಸಿದ್ದಾರೆ.

ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.