Saval TV on YouTube
ಮೈಸೂರು(Mysuru): ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ(ಮೈಲ್ಯಾಕ್) ಅಧ್ಯಕ್ಷ ಆರ್.ರಘು ಕೌಟಿಲ್ಯ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ಸರ್ಕಾರ ಆದೇಶಿಸಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಾಜ್ಯ ಸಚಿವರ ಸ್ಥಾನಮಾನದೊಂದಿಗೆ ಅನ್ವಯಿಸುವ ಸೌಲಭ್ಯಗಳನ್ನು ನೀಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ವಿ.ಸುನಂದಮ್ಮ ಜ.9ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.















