ಮನೆ ರಾಜ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

0

ಬೆಂಗಳೂರು: ರಾಜ್ಯದಲ್ಲಿ ಗೋಧ್ರಾ ರೀತಿ ಘಟನೆ ಆಗುತ್ತೆಂದು ಹೇಳಿಕೆ ಹಿನ್ನೆಲೆ ಸಿಸಿಬಿ ಅಧಿಕಾರಿಗಳಿಂದ ಎಂಎಲ್‍ ಸಿ ಹರಿಪ್ರಸಾದ್​  ವಿಚಾರಣೆ ವಿಚಾರಕ್ಕೆ ಸಂಬಂಧಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ನೀವು ಗಮನಿಸಬೇಕು, ಯಾರು ನಿರ್ದೇಶನ ಮಾಡುತ್ತಿದ್ದಾರೆ. ರಾಜ್ಯಪಾಲರು ಪದೇಪದೆ ಇದರ ಬಗ್ಗೆ ಕೇಳ್ತಿದ್ದಾರೆ. ಇದು ತನಿಖೆ ಆಗ್ತಿದೆಯಾ? ಇಲ್ಲವಾ ಎಂದು ಪದೇಪದೆ ಕೇಳುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯಪಾಲರಾದ ಗೆಹ್ಲೋಟ್ ಅವರು ಒತ್ತಡ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯಪಾಲರ ಮಾತಿಗೆ ಗೌರವ ಕೊಟ್ಟು ಗೃಹ ಇಲಾಖೆಯವರು ಕೇಳಿದ್ದಾರೆ. ಅಷ್ಟೇ ಸೀಮಿತವಾಗಿದೆ. ರಾಜ್ಯಪಾಲರು ಏಕೆ ಇಷ್ಟು ಆಸಕ್ತಿ ಇದ್ದಾರೆ ಎಂದು ಗಮನಿಸಬೇಕು. ರಾಜ್ಯಪಾಲರಿಗೆ ಕೇಂದ್ರ ಸರ್ಕಾರದಿಂದ ನಿರ್ದೇಶನವಿದೆಯಾ? ಸರ್ಕಾರ, ಹರಿಪ್ರಸಾದ್ ​ಗೆ ಮುಜುಗರ ಮಾಡಬೇಕು ಅಂತಾ ಇದ್ಯಾ? ಒಂದು ಫ್ಯಾಟರ್ನ್ ಇದೆ, ಎಲ್ಲೆಲ್ಲಿ ಬಿಜೆಪಿ ಇಲ್ಲ ಅಲ್ಲಲ್ಲಿ ರಾಜ್ಯಪಾಲರ ಮೂಲಕ ಆಳ್ವಿಕೆ ಮಾಡಲು ಹೊರಟಿದ್ದಾರೆ. ಏನೇ ಇದ್ದರೂ ಕಾನೂನು ಚೌಕಟ್ಟಿನಲ್ಲಿ ಮಾಡ್ತೇವೆ. ಕಾನೂನು ಸುವ್ಯವಸ್ಥೆಗೂ, ರಾಜ್ಯಪಾಲರಿಗೆ ಏನು ಸಂಬಂಧ? ಕಾನೂನು ಸುವ್ಯವಸ್ಥೆ ಹದಗೆಟ್ಟಿದೆಯಾ? ಹಿಂದಿನ ಸರ್ಕಾರ ಇದ್ದಾಗ ಯಾವತ್ತೂ ಈ ರೀತಿ ಆಗಿಲ್ಲ. ಈ ಬಾರಿ ಯಾಕೆ ಈ ರೀತಿ ಆಗುತ್ತಿದೆ. ಜನ ಇದರ ಬಗ್ಗೆ ವಿಚಾರ ಮಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.