ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ನಾಯಕರಿಗೆ ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಅಧಿಕಾರದಲ್ಲಿದ್ದಾರೆ ಯಾರ ಯಾರ ರಾಜೀನಾಮೆ ತೆಗೆದುಕೊಂಡರು ಗೊತ್ತಿದೆ. ಮಾಡಾಳ್ ವಿರೂಪಾಕ್ಷಪ್ಪ, ಕೆ.ಎಸ್ ಈಶ್ವರಪ್ಪ ರಾಜೀನಾಮೆ ಪಡೆದ್ರಾ..? ಅರಗ ಜ್ಞಾನೇಂದ್ರ ಅವರ ರಾಜೀನಾಮೆ ಪಡೆದರಾ..? ಯುವಕರ ಭವಿಷ್ಯ ಹಾಳು ಮಾಡಿದ ಬಿಜೆಪಿಗೆ ಯಾವ ನೈತಿಕತೆ ಇದೆ ಎಂದು ಕಿಡಿಕಾರಿದರು.
ಲೋಕಸಭೆಯಲ್ಲಿ ಭದ್ರತಾ ವೈಫಲ್ಯ ಪ್ರಕರಣ ಸಂಬಂಧ ಸಂಸದ ಪ್ರತಾಪ್ ಸಿಂಹ ಪಾಸ್ ನೀಡಿದ್ದ ಬಗ್ಗೆ, ಪ್ರತಾಪ್ ಸಿಂಹ ಸಹೋದರನ ವಿರುದ್ದ ಮರಗಳ್ಳತನ ಆರೋಪದ ಬಗ್ಗೆ ಬಿಜೆಪಿಯವರು ಮೌನವಾಗಿದ್ದಾರೆ. ಮೌನ ಎಂದರೇ ಎಸ್ ಅಂತಾನಾ..? ಎಂದು ಸಚಿವ ಪ್ರಿಯಾಂಕ್ ಖರ್ಗೆ ಗುಡುಗಿದರು
Saval TV on YouTube