ಬೆಂಗಳೂರು: ಮಾಜಿ ಸಿಎಂ ಎಸ್. ಎಂ. ಕೃಷ್ಟ ಅವರ ನಿಧನಕ್ಕೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಸಂತಾಪ ಸೂಚಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ ಕೃಷ್ಣ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ರಾಜ್ಯದ ಧೀಮಂತ ನಾಯಕ ಹಾಗೂ ರಾಜಕೀಯ ಮುತ್ಸದ್ದಿಯಾದ ಅವರು ಬೆಂಗಳೂರು ಭಾರತದ ತಂತ್ರಜ್ಞಾನದ ರಾಜಧಾನಿಯಾಗಿ ಬೆಳೆಯಲು ಅಡಿಪಾಯ ಹಾಕಿದ ಮಹಾನ್ ವ್ಯಕ್ತಿ ಎಂದಿದ್ದಾರೆ.
ಅವರ ಜೊತೆ ದಶಕಗಳ ಸ್ನೇಹ ಹೊಂದಿದ್ದ ನಾನು, ಅವರ ಸಂಪುಟದಲ್ಲಿ ಸಚಿವನಾಗಿ ಕಾರ್ಯನಿರ್ವಹಿಸಿದ ಕ್ಷಣಗಳು ಎಂದೆಂದಿಗೂ ಅವಿಸ್ಮರಣೀಯ. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ರಾಮಲಿಂಗಾ ರೆಡ್ಡಿ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು.