ಮೈಸೂರು (Mysuru): ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.
ಮಹಾನಗರ ಪಾಲಿಕೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ನೇತಾಜಿ ಸರ್ಕಲ್ ರಿಂಗ್ ರಸ್ತೆ, ದಟ್ಟಗಳ್ಳಿಯಲ್ಲಿ ಮೈಸೂರು ನಗರ ಹೊರ ವರ್ತುಲ ರಸ್ತೆಯಲ್ಲಿರುವ ವಿದ್ಯುತ್ ಕಂಬಗಳಿಗೆ ಭೂಗತ ಕೇಬಲ್ ಹಾಗೂ ಸಿ.ಸಿ.ಎಂ.ಎಸ್. ವ್ಯವಸ್ಥೆಯೊಂದಿಗೆ ಎಲ್.ಇ.ಡಿ ಬೀದಿ ದೀಪಗಳನ್ನು ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಲ್.ನಾಗೇಂದ್ರ, ಜಿ.ಟಿ.ದೇವೇಗೌಡ, ಮೇಯರ್ ಸುನಂದಾ ಪಾಲನೇತ್ರಾ, ನಗರಪಾಲಿಕೆ ಆಯುಕ್ತರಾದ ಲಕ್ಷ್ಮಿಕಾಂತ ರೆಡ್ಡಿ, ಮುಡಾ ಮಾಜಿ ಅಧ್ಯಕ್ಷರಾದ ಹೆಚ್.ವಿ.ರಾಜೀವ್ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
Saval TV on YouTube