ಮನೆ ಸುದ್ದಿ ಜಾಲ ಶಾಲೆಯಲ್ಲಿ ರೋಬೋಟಿಕ್ಸ್ ಲ್ಯಾಬ್ ಗೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

ಶಾಲೆಯಲ್ಲಿ ರೋಬೋಟಿಕ್ಸ್ ಲ್ಯಾಬ್ ಗೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

0

ಮೈಸೂರು (Mysuru)- ಮೈಸೂರಿನ ಸಿದ್ಧಾರ್ಥ ನಗರದಲ್ಲಿನ ಶಾಂತಲಾ ಶಾಲೆಯಲ್ಲಿ ರೋಬೋಟಿಕ್ಸ್ ಲ್ಯಾಬ್ ಅನ್ನು ಸಚಿವರಾದ ಎಸ್.ಟಿ.ಸೋಮಶೇಖರ್ (S.T.Somashekar) ಅವರು ಉದ್ಘಾಟಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಮೈಸೂರಿನ ಖಾಸಗಿ ಶಾಲೆ ದೇಶದಲ್ಲೇ ಮೊದಲ ಬಾರಿಗೆ ರೋಬೋಟ್ ಮೂಲಕ ಮಕ್ಕಳಿಗೆ ಶಿಕ್ಷಣ ನೀಡಲು ಮುಂದಾಗಿದೆ. ಈ ಮೂಲಕ ವಿನೂತನ ಪ್ರಯೋಗಕ್ಕೆ ಕೈ ಹಾಕಿದೆ.
ಅಲ್ಲದೆ, ದೇಶದಲ್ಲೇ ಮೊದಲ ರೋಬೋಟಿಕ್ ಲ್ಯಾಬ್ ಹೊಂದಿರುವ ಹೆಗ್ಗಳಿಕೆಗೆ ಶಾಲೆ ಪಾತ್ರವಾಗಿದೆ.
ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿಕೊಂಡಿರುವ ಖಾಸಗಿ ಶಾಲೆ, ಮಕ್ಕಳಲ್ಲಿ ಕಲಿಕೆ ಗುಣಮಟ್ಟ ಹೆಚ್ಚಿಸಲು ಎಜುಕೇಷನ್ ರೋಬೋಟ್ ಮೊರೆ ಹೋಗಿದ್ದು, ಪೂರ್ವ ಪ್ರಾಥಮಿಕ ಶಿಕ್ಷಣದಿಂದ 9ನೇ ತರಗತಿವರೆಗೆ ರೋಬೋಟ್ ಭೋದನೆ ಮಾಡಲಿದೆ. ಜಪಾನ್ ನಿಂದ ಎರಡು ರೋಬೋಟ್ ತರಿಸಿಕೊಳ್ಳಲಾಗಿದ್ದು, ಒಂದೊಂದು ರೋಬೋಟ್ ಗೆ ತಲಾ ಎರಡು ಲಕ್ಷ ರೂಪಾಯಿ ಖರ್ಚಾಗಿದೆ.
ಈ ರೋಬೋಟ್ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಮೂಲಕ ಕಾರ್ಯ ‌ನಿರ್ವಹಿಸಲಿದೆ.
ಈ ವೇಳೆ ಶಿಕ್ಷಣ ಸಚಿವರಾದ ನಾಗೇಶ್, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ರಾಮದಾಸ್, ದಕ್ಷಿಣ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.