ಮನೆ ಸುದ್ದಿ ಜಾಲ ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಕಾರ್ಯಕ್ರಮಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ

‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಕಾರ್ಯಕ್ರಮಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ

0

ಮೈಸೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾದ ಕಂದಾಯ ದಾಖಲೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮಕ್ಕೆ ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಇಲವಾಲ ಹೋಬಳಿ ದಡದಕಲ್ಲಹಳ್ಳಿ ಗ್ರಾಮದಲ್ಲಿ ಶನಿವಾರ ಚಾಲನೆ ನೀಡಿದರು.

ಪಹಣಿ, ಜಾತಿ ಪ್ರಮಾಣಪತ್ರ, ಆದಾಯ ದೃಢೀಕರಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ತೆರಳಿ ನೀಡಲಾಯಿತು. ಈ ವೇಳೆ ಗ್ರಾಮದ ರೈತರ ಸಮಸ್ಯೆಗಳನ್ನು ಆಲಿಸಿದ ಸಚಿವರು, ದಾಖಲೆಗಳಿಗಾಗಿ ಕಚೇರಿಗೆ ಅಲೆದಾಡುವುದನ್ನು ತಪ್ಪಿಸುವ ದೃಷ್ಟಿಯಿಂದ ಸರ್ಕಾರವೇ ನಿಮ್ಮ ಮನೆ ಬಳಿಗೆ ಬಂದಿದೆ ಎಂದರು.

ಜಿಲ್ಲೆಯಲ್ಲಿ 1.5 ಲಕ್ಷ ಮನೆಗಳಿಗೆ ಪಹಣಿ, ಜಾತಿ ಆದಾಯ ಪ್ರಮಾಣಪತ್ರವನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ಕೆ ಇಂದು ಚಾಲನೆ ನೀಡಲಾಗಿದೆ. ಕಂದಾಯ ಇಲಾಖೆಯಲ್ಲಿನ ಸಮಸ್ಯೆ ನಿವಾರಣೆ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕೂಡ ಇಂದು ರೈತರ ಮನೆಗೆ ತೆರಳಿ ದಾಖಲೆಗಳನ್ನು ನೀಡಲಾಗುತ್ತಿದೆ ಎಂದರು.

ದಕ್ಷ, ಪ್ರಮಾಣಿಕ ಜಿಲ್ಲಾಧಿಕಾರಿಗಳು ಜನಸಾಮಾನ್ಯರ ನೋವಿಗೆ ಸ್ಪಂದಿಸುತ್ತಿದ್ದಾರೆ. ಸರ್ಕಾರಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ. ಕಂದಾಯ ಇಲಾಖೆಯಲ್ಲಿನ ಸಮಸ್ಯೆಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಅಪರ ಜಿಲ್ಲಾಧಿಕಾರಿ ಡಾ. ಬಿ‌.ಎಸ್. ಮಂಜುನಾಥಸ್ವಾಮಿ, ಉಪವಿಭಾಗಾಧಿಕಾರಿ ಕಮಲಾಭಾಯಿ ತಹಶೀಲ್ದಾರ್ ರಕ್ಷಿತ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ರಮೇಶ್ ಸೇರಿದಂತೆ ಅಧಿಕಾರಿಗಳು, ಮುಖಂಡರು ಹಾಜರಿದ್ದರು.

ಹಿಂದಿನ ಲೇಖನಅನಧಿಕೃತ ನೀರಿನ‌ ಸಂಪರ್ಕ ಕೂಡಲೇ ಅಧಿಕೃತಗೊಳಿಸಿಕೊಳ್ಳಿ: ಮೈಸೂರು ಮಹಾನಗರ ಪಾಲಿಕೆ ಸೂಚನೆ.
ಮುಂದಿನ ಲೇಖನಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಬಿಜೆಪಿ ಸರ್ಕಾರದ ತಾರತಮ್ಯ: ರಾಮಲಿಂಗಾ ರೆಡ್ಡಿ