ಮನೆ ರಾಜ್ಯ ಪಕ್ಷದ ಚೌಕಟ್ಟು ಮೀರಿ ಸಚಿವರು, ಶಾಸಕರು ಮಾತನಾಡುವಂತಿಲ್ಲ: ರಣದೀಪ್ ಸಿಂಗ್ ಸುರ್ಜೇವಾಲ

ಪಕ್ಷದ ಚೌಕಟ್ಟು ಮೀರಿ ಸಚಿವರು, ಶಾಸಕರು ಮಾತನಾಡುವಂತಿಲ್ಲ: ರಣದೀಪ್ ಸಿಂಗ್ ಸುರ್ಜೇವಾಲ

0

ಬೆಂಗಳೂರು: ಪಕ್ಷದ ಚೌಕಟ್ಟು ಮೀರಿ ಸಚಿವರು, ಶಾಸಕರು ಮಾತನಾಡುವಂತಿಲ್ಲ. , ಚೌಕಟ್ಟು ಮೀರಿ ಹೇಳಿಕೆಗಳನ್ನು ನೀಡಿದರೆ ಶಿಸ್ತು ಕ್ರಮ ಜರುಗಿಸುತ್ತೇವೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಪಕ್ಷದ ನಾಯಕರ ಜತೆ ಸಮಾಲೋಚನೆ ನಡೆಸಿದ ಬಳಿಕ  ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸಭೆಯಲ್ಲಿ ನಿಗಮ ಮಂಡಳಿಗಳ ನೇಮಕ ಬಗ್ಗೆಯೂ ಚರ್ಚೆ ಆಗಿದೆ. ನಿಗಮ ಮಂಡಳಿ ನೇಮಕದ ಕುರಿತು ಮತ್ತಷ್ಟು ಚರ್ಚೆ ಆಗಬೇಕಿದೆ. ಮಧ್ಯಪ್ರದೇಶ ಚುನಾವಣೆ ಮುಗಿದ ಬಳಿಕ ಮತ್ತೆ ವಾಪಸ್ ಬರುತ್ತೇನೆ. 2-3 ಹಂತದ ಮಾತುಕತೆ ಆಗುವುದು ಬಾಕಿ ಇದೆ ಎಂದು ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಚರ್ಚೆ ಮಾಡಿದ್ದೇವೆ. ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್​​ ಪಕ್ಷ ಗೆಲ್ಲಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರೂ ಭರವಸೆ ನೀಡಿದ್ದಾರೆ. ಅಭ್ಯರ್ಥಿಗಳ ಘೋಷಣೆ ವಿಳಂಬ ಆಗಬಾರದೆಂದು ಚರ್ಚೆ ಮಾಡಿದ್ದೇವೆ. ಕಾಂಗ್ರೆಸ್ ಗ್ಯಾರಂಟಿಗಳ ಜಾರಿಯಿಂದ ಜನರಿಗೆ ಅನುಕೂಲವಾಗಿದೆ. ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಕೆಲಸ ಆಗಬೇಕಿದೆ. ಮುಂದಿನ 15 ದಿನಗಳ ಒಳಗಾಗಿ ಮೊದಲ ಹಂತದ ಸಭೆ ನಡೆಯಲಿದೆ. ಯಾರು ಸೂಕ್ತ ಅಭ್ಯರ್ಥಿ ಅಂತಾ ಪ್ರಾಥಮಿಕ ಹಂತದ ಚರ್ಚೆಯಾಗಿದೆ ಎಂದು ಸುರ್ಜೇವಾಲ​ ಹೇಳಿದರು.

ಹಿಂದಿನ ಲೇಖನನೆರೆ ರಾಜ್ಯದಲ್ಲಿ ಮೆಡಿಕಲ್ ಸೀಟು ಕೊಡಿಸುವುದಾಗಿ ವಂಚನೆ: ಆರೋಪಿ ಬಂಧನ
ಮುಂದಿನ ಲೇಖನಕಳೆದೆರಡು ದಿನಗಳಿಂದ ಬೆಂಗಳೂರಿನ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ