ಮೈಸೂರು(Mysuru): ವಸತಿ ಶಾಲೆಯ ಗಣಿತ ಶಿಕ್ಷಕ ದೊರೆಸ್ವಾಮಿ ಎಂಬಾತ ಹೆಣ್ಣು ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸಿರುವ ಆರೋಪದ ಮೇಲೆ ಆತನನ್ನು ಕೆಲಸದಿಂದ ವಜಾಗೊಳಿಸಿ, ಪಿಸಿಒ ಆದೇಶ ಹೊರಡಿದ್ದಾರೆ.
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಹಿರೇಹಳ್ಳಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ವಸತಿ ಶಾಲೆಯ ಶಿಕ್ಷಕ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಶಾಲಾ ವಿದ್ಯಾರ್ಥಿನಿಯರಿಗೆ ಕುತ್ತಿಗೆ ಚೈನ್ ತೆಗೆಯಿರಿ ಅಲರ್ಜಿಯಾಗುತ್ತದೆ ಎಂದು ಹತ್ತಿರ ತೆರಳಿ ಅಸಭ್ಯವಾಗಿ ವರ್ತಿಸುತ್ತಾನೆ ಎಂದು ಆರೋಪಿಸಿರುವ ವಿದ್ಯಾರ್ಥಿನಿಯರು ಉಪವಾಸ ಧರಣಿ ನಡೆಸಿದ್ದರು. ಧರಣಿ ಬಳಿಕ ರಾತ್ರಿ ಊಟ ಮಾಡಿದ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಕೆಲ ಮಕ್ಕಳು ಹೆಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪಿಸಿಒ ಪ್ರಭಾ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ವಿದ್ಯಾರ್ಥಿನಿಯರ ಅಹವಾಲು ಆಲಿಸಿದ ಪಿಸಿಒ ಶಿಕ್ಷಕ ದೊರೆಸ್ವಾಮಿಯನ್ನು ಕೆಲಸದಿಂದ ವಜಾಮಾಡಿದ್ದಾರೆ.