ಕಾಸರಗೋಡು: ಮುಂಬೈಗೆ ತೆರಳುತ್ತಿದ್ದ ಎಕ್ಸ್ ಪ್ರೆಸ್ ರೈಲಿನ ಮೇಲೆ ದುಷ್ಕರ್ಮಿಗಳು ಶುಕ್ರವಾರ ರಾತ್ರಿ ಕಲ್ಲು ತೂರಾಟ ನಡೆಸಿದ್ದು ಕಿಟಕಿ ಗಾಜು ಜಖಂಗೊಂಡಿದೆ ಎಂದು ರೈಲ್ವೆ ಪೊಲೀಸ್ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ತಿರುವನಂತಪುರಂ ಮತ್ತು ಮುಂಬೈ ನಡುವೆ ಓಡುತ್ತಿರುವ ನೇತ್ರಾವತಿ ಎಕ್ಸ್ ಪ್ರೆಸ್ ಪ್ರಯಾಣಿಕರಿಗೆ ಯಾವುದೇ ಗಾಯಗಳ ವರದಿಯಾಗದ ಕಾರಣ ಪ್ರಯಾಣವನ್ನು ಮುಂದುವರೆಸಿದೆ. ಶುಕ್ರವಾರ ರಾತ್ರಿ 8:45ರ ಸುಮಾರಿಗೆ ಕಾಸರಗೋಡು ಜಿಲ್ಲೆಯ ಕುಂಬಳೆ ಪ್ರದೇಶದಲ್ಲಿ ರೈಲು ಓಡುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ ಎಂದು ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ರೈಲುಗಳ ಮೇಲೆ ಕಲ್ಲು ತೂರಾಟದ ಅನೇಕ ಘಟನೆಗಳು ಕೇರಳದಿಂದ ವರದಿಯಾಗಿವೆ. ಆಗಸ್ಟ್ 21 ರಂದು ವಂದೇ ಭಾರತ್ ಎಕ್ಸ್ ಪ್ರೆಸ್ ಮತ್ತು ರಾಜಧಾನಿ ಎಕ್ಸ್ ಪ್ರೆಸ್ ನ ಕಿಟಕಿ ಗಾಜುಗಳು ಇಂತಹ ದಾಳಿಯಲ್ಲಿ ಹಾನಿಗೊಳಗಾಗಿದ್ದವು.
Saval TV on YouTube