ಮನೆ ಅಪರಾಧ ನಿಗೂಢವಾಗಿ ನಾಪತ್ತೆಯಾಗಿದ್ದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಶವವಾಗಿ ಪತ್ತೆ

ನಿಗೂಢವಾಗಿ ನಾಪತ್ತೆಯಾಗಿದ್ದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಶವವಾಗಿ ಪತ್ತೆ

0

ಶಿವಮೊಗ್ಗ: ಎರಡು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ (54) ಶವ ಇಂದು ಹೊಸನಗರ ತಾಲ್ಲೂಕಿನ ಪಟಗುಪ್ಪ ಹೊಳೆಯಲ್ಲಿ ಪತ್ತೆಯಾಗಿದೆ.

ಶುಕ್ರವಾರ ನಾಪತ್ತೆಯಾಗಿದ್ದ ಪ್ರಕಾಶ್ ಅವರ ಮೊಬೈಲ್ ಹಾಗೂ ಕಾರು ಶನಿವಾರ ಪಟಗುಪ್ಪೆ ಸೇತುವೆ ಬಳಿ ಪತ್ತೆಯಾಗಿತ್ತು. ಘಟನೆ ಸಂಬಂಧ ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ಪ್ರಕರಣ ದಾಖಲಿಸಿದ್ದರು.

ದೂರು ದಾಖಲಾದ ನಂತರ ಪತ್ತೆ ಕಾರ್ಯಾಚರಣೆ ಶುರು ಮಾಡಿದ್ದ ಪೊಲೀಸರಿಗೆ, ಶನಿವಾರ ಸಂಜೆ ಪ್ರಕಾಶ್ ಅವರ ಕಾರು, ಮೊಬೈಲ್ ಪಟಗುಪ್ಪೆ ಸೇತುವೆ ಮೇಲೆ ಪತ್ತೆಯಾಗಿತ್ತು. ಕಾರಿನಿಂದ ಸ್ವಲ್ಪ ದೂರದಲ್ಲಿ ಸೇತುವೆ ಮೇಲೆ ಚಪ್ಪಲಿಗಳು ಸಹ ಪತ್ತೆಯಾಗಿವೆ. ಈ ಆಧಾರದಿಂದ ಪ್ರಕಾಶ್ ಅವರ ಪತ್ತೆಗಾಗಿ ನಿರಂತರವಾಗಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಶೋಧ ಕಾರ್ಯ ನಡೆಸಿದ್ದರು. ಅಂತಿಮವಾಗಿ ಸೋಮವಾರ ಬೆಳಗ್ಗೆ ಪ್ರಕಾಶ್ ಮೃತದೇಹ ಪತ್ತೆಯಾಗಿದೆ. ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಸಾವಿಗೆ ಇನ್ನೂ ನಿಖರ ಕಾರಣ ತಿಳಿದಿಲ್ಲ. ಶಿವಮೊಗ್ಗ ಜಿಲ್ಲೆಯ ಸಾಗರ ಭಾಗದಲ್ಲಿ ಪ್ರಕಾಶ್ ಟ್ರಾವೆಲ್ಸ್ ಚಿರಪರಿಚಿತವಾಗಿದೆ. ಸುಮಾರು 20 ವರ್ಷಗಳಿಂದ ಬಸ್‌ಗಳ ಸೇವೆ ಒದಗಿಸುತ್ತಿದ್ದಾರೆ.

ಕೊರೊನಾ ಲಾಕ್‌ಡೌನ್ ಆದ ಬಳಿಕ ಪ್ರಕಾಶ್‌ ಟ್ರಾವೆಲ್ಸ್ ಸಂಸ್ಥೆ ದೊಡ್ಡ ಪ್ರಮಾಣದ ನಷ್ಟ ಅನುಭವಿಸಿತ್ತು. ಭಾರೀ ಆರ್ಥಿಕ ನಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಅದರೆ ಪ್ರಕಾಶ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕುಟುಂಬಸ್ಥರು ಮತ್ತು ಬಂಧುಗಳು ಸೂಕ್ತ ತನಿಖೆ ನಡೆಸುವಂತೆ ಪೊಲೀಸರಲ್ಲಿ ಕೇಳಿಕೊಂಡಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.

ಹಿಂದಿನ ಲೇಖನಜೆಎನ್ ಯು ಕ್ಯಾಂಪಸ್ ನಲ್ಲಿ ಪಿಹೆಚ್ ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ
ಮುಂದಿನ ಲೇಖನಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ನಿವೃತ್ತಿ ಘೋಷಣೆ