ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಪತ್ತೆಯಾಗಿದ್ದ 10 ನೇ ತರಗತಿ ವಿದ್ಯಾರ್ಥಿಯ ಶವ ಭದ್ರಾ ನದಿಯಲ್ಲಿ ಪತ್ತೆಯಾಗಿದೆ.
ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿಯೋರ್ವ ಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿದೆ. ಬಾಳೆಹೊಳೆ ಮೂಲದ ವಿದ್ಯಾರ್ಥಿ ಶ್ರೇಯಸ್ ಮೃತ ದುರ್ದೈವಿ.
ಕಳಸ ಪಟ್ಟಣದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ. ಮಾರ್ಚ್ 16ರಂದು ನಾಪತ್ತೆಯಾಗಿದ್ದ. ಬೆಳಿಗ್ಗೆ ಶಾಲೆಗೆಂದು ಹೋದವನು ಮನೆಗೆ ವಾಪಾಸ್ ಆಗಿರಲಿಲ್ಲ. ಇದರಿಂದ ಗಾಬರಿಯಾದ ಪೋಷಕರು ಪೊಲಿಸ್ ಠಾಣೆಯಲ್ಲಿ ದೂರು ನೀಡಿದ್ದರು. ನಾಲ್ಕು ದಿನಗಳ ಕಾಲ ಹುಡುಕಾಡಿದರೂ ವಿದ್ಯಾರ್ಥಿ ಸುಳಿವು ಸಿಕ್ಕಿರಲಿಲ್ಲ.
ವಿದ್ಯಾರ್ಥಿ ಶ್ರೇಯಸ್ ಮೃತದೇಹ ಇದೀಗ ಭದ್ರಾನದಿಯಲ್ಲಿ ಪತ್ತೆಯಾಗಿದೆ. ಮೃತ ವಿದ್ಯಾರ್ಥಿ ಹಾಸನ ಜಿಲ್ಲೆಯ ಬೇಲೂರು ಮೂಲದವನಾಗಿದ್ದು, ಕಳಸದಲ್ಲಿ ತನ್ನ ಚಿಕ್ಕಮ್ಮನ ಮನೆಯಲ್ಲಿದ್ದು, ವ್ಯಾಸಂಗ ಮಾಡುತ್ತಿದ್ದ. ಈ ಸಂಬಂಧ ಕಳಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ