ಮನೆ ರಾಜ್ಯ ಚಾಮರಾಜನಗರ ಬಂದ್‌ ಗೆ ಮಿಶ್ರ ಪ್ರತಿಕ್ರಿಯೆ

ಚಾಮರಾಜನಗರ ಬಂದ್‌ ಗೆ ಮಿಶ್ರ ಪ್ರತಿಕ್ರಿಯೆ

0

ಚಾಮರಾಜನಗರ: ಅಂಬೇಡ್ಕರ್ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ದಲಿತ ಮಹಾಸಭಾ ನೇತೃತ್ವದಲ್ಲಿ ದಲಿತ ಸಂಘಟನೆಗಳು ಮಂಗಳವಾರ ಕರೆ ನೀಡಿರುವ ಚಾಮರಾಜನಗರ ಬಂದ್‌ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

Join Our Whatsapp Group

ನಗರದಲ್ಲಿ ವಾಣಿಜ್ಯ ವಹಿವಾಟು ಸ್ತಬ್ದಗೊಂಡಿದೆ. ನಗರದ ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ, ಮಾರುಕಟ್ಟೆ ಪ್ರದೇಶಗಳಲ್ಲಿರುವ ವಾಣಿಜ್ಯ ಮಳಿಗೆಗಳು ಬಾಗಿಲು ಮುಚ್ಚಿವೆ. ನಗರ ವ್ಯಾಪ್ತಿಗೆ ಸೀಮಿತವಾಗಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಆದರೆ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ,  ಆಟೋಗಳ ಸಂಚಾರ ಎಂದಿನಂತಿದೆ.

ದಲಿತ ಹಾಗೂ ಪ್ರಗತಿಪರಪರ ಸಂಘಟನೆಗಳು ನಗರದ ಭುವನೇಶ್ವರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದವು.