ಮನೆ ಅಪರಾಧ ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್ ಜೈಲಿಗೆ..!

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್ ಜೈಲಿಗೆ..!

0

ಬೆಂಗಳೂರು : ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್‌ರನ್ನು ಫೆ.26ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.

ಬಿಕ್ಲು ಶಿವ ಕೊಲೆ ಕೇಸಲ್ಲಿ ಬೈರತಿ ಬಸವರಾಜ್ ಐದನೇ ಆರೋಪಿಯಾಗಿದ್ದಾರೆ. ಇಂದು ಬೈರತಿ ಬಸವರಾಜ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಿಐಡಿ ಮತ್ತೆ ಪೊಲೀಸ್ ಕಸ್ಟಡಿಗೆ ನೀಡವಂತೆ ಮನವಿ ಮಾಡಿತ್ತು. ವೈದ್ಯಕೀಯ ವರದಿ ಆಧರಿಸಿ ಜೈಲಿಗೆ ಕಳುಹಿಸುವಂತೆ ಬೈರತಿ ಪರ ವಕೀಲರು ಮನವಿ ಮಾಡಿದ್ದರು.

ಫೆ.26ರವರೆಗೆ ಬೈರತಿ ಬಸವರಾಜ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜಯದೇವ ಆಸ್ಪತ್ರೆಯಲ್ಲಿ ನೀಡಿರುವ ಡಯೆಟ್ ಪ್ಲಾನ್ ಅನ್ನು ಜೈಲಿನಲ್ಲಿ ಮುಂದುವರೆಸಲು ಕೋರ್ಟ್ ಸೂಚನೆ ನೀಡಿದೆ. ಜೈಲಿನಲ್ಲಿ ಕೂಡ ಡಯೆಟ್ ಪ್ಲಾನ್ ಪ್ರಕಾರವೇ ಊಟ ನೀಡಲು ನ್ಯಾಯಾಲಯ ಸೂಚಿಸಿದೆ.