ಮನೆ ರಾಜ್ಯ ಬಿಕ್ಲು ಶಿವ ಕೊಲೆ ಕೇಸ್​ನಲ್ಲಿ ಶಾಸಕ ಭೈರತಿ ಬಸವರಾಜ್​​ ಅರೆಸ್ಟ್‌..!

ಬಿಕ್ಲು ಶಿವ ಕೊಲೆ ಕೇಸ್​ನಲ್ಲಿ ಶಾಸಕ ಭೈರತಿ ಬಸವರಾಜ್​​ ಅರೆಸ್ಟ್‌..!

0

ಬೆಂಗಳೂರು : ಸೈಟ್ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಇದೀಗ ಶಾಸಕ ಭೈರತಿ ಬಸವರಾಜ್​ನ್ನು ದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ತನಿಖೆ ವೇಳೆ ಆರೋಪಿ ಜಗ್ಗ ಯಾರೆಂಬುದೇ ಗೊತ್ತಿಲ್ಲವೆಂದು ಭೈರತಿ ಬಸವರಾಜ್​ ಹೇಳಿದ ಸುಳ್ಳುಗಳೇ ಅವರಿಗೆ ಇದೀಗ ಮುಳುವಾಗಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಈಗಾಗಲೇ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾರೆ.

ಇದೀಗ ಇಂಡಿಗೋ – 6E683 ವಿಮಾನದಲ್ಲಿ ಅಹಮದಾಬಾದ್​​ನಿಂದ ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಸಿಐಡಿ ತಂಡ ಅವರನ್ನು ಬಂಧಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.