ಮನೆ ಸುದ್ದಿ ಜಾಲ ಮೆಲ್ಲಹಳ್ಳಿ ಕಸ ವಿಲೇವಾರಿ ಘಟಕ ಉದ್ಘಾಟಿಸಿದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ

ಮೆಲ್ಲಹಳ್ಳಿ ಕಸ ವಿಲೇವಾರಿ ಘಟಕ ಉದ್ಘಾಟಿಸಿದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ

0

ತಾಂಡವಪುರ: ಮೆಲ್ಲಹಳ್ಳಿ ಹಾರೋಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ಹಳ್ಳಿ ಕೆರೆಹುಂಡಿ ಗ್ರಾಮದ ಬಳಿ ನಿರ್ಮಿಸಿರುವ ಕಸ ವಿಲೇವಾರಿ ಘಟಕವನ್ನು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಘಟಕದ ಸುತ್ತ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಗ್ರಾಮದಲ್ಲಿ ಏರ್ಪಡಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ನಮ್ಮ ಗ್ರಾಮದಲ್ಲಿ ಸ್ಮಶಾನ ಭೂಮಿ ಇಲ್ಲ ನಮಗೆ ಸ್ಮಶಾನವನ್ನು ಗುರುತಿಸಿ ಕೊಡಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಮಾತನಾಡಿದ ಡಾ. ಯತೀಂದ್ರ ಸಿದ್ರಾಮಯ್ಯ, ಈ ವಿಚಾರವಾಗಿ ಸ್ಥಳದಲ್ಲಿದ್ದ ಇಲಾಖೆ ಅಧಿಕಾರಿಗಳ ಜೊತೆ ಮಾತನಾಡಿ, ಪ್ರತಿ ಗ್ರಾಮದಲ್ಲೂ ಸ್ಮಶಾನಭೂಮಿ ಇರಲೇಬೇಕು ಈ ಬಗ್ಗೆ ನಲ್ಲಹಳ್ಳಿ ಹಾಗೂ ಹಳ್ಳಿಕೆರೆಹುಂಡಿ ಗ್ರಾಮಸ್ಥರು ಹಲವಾರು ಬಾರಿ ನನ್ನ ಗಮನಕ್ಕೆ ತಂದಿದ್ದಾರೆ. 2 ಗ್ರಾಮಕ್ಕೆ ಪ್ರತ್ಯೇಕವಾಗಿ ಸರ್ಕಾರದ ಭೂಮಿ ಎಲ್ಲಿದೆ ಅಲ್ಲಿ ಸ್ಮಶಾನ ಜಾಗವನ್ನು ಗುರುತಿಸಿ ಅಭಿವೃದ್ಧಿಪಡಿಸಬೇಕು ಎಂದು ಸ್ಥಳದಲ್ಲಿದ್ದ ಪಿಡಿಒ ಹಾಗೂ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಲ್ಲದೇ ಗ್ರಾಮದ  ಎಲ್ಲಾ ಸಮಸ್ಯೆಗಳನ್ನು ಹಂತಹಂತವಾಗಿ ಬಗೆಹರಿಸುತ್ತೇನೆ ಎಂದು ಗ್ರಾಮಸ್ಥರಿಗೆ ಶಾಸಕರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವರುಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕೆ ಮುದ್ದೇಗೌಡ,  ಗ್ರಾಮ ಪಂಚಾಯತಿ ಅಧ್ಯಕ್ಷೆ ಶಾಂತಮ್ಮ,  ಎಪಿಎಂಸಿ ಅಧ್ಯಕ್ಷ ಲಕ್ಷ್ಮಿಪುರ ಅನಿಲ್ ಕುಮಾರ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುಳಾ ಮಂಜುನಾಥ್,  ಮುಖಂಡರಾದ ಗಂಗ ತಿಮ್ಮಯ್ಯ,  ನಾಗರಾಜ ನಾಯಕ,  ಮೆಲ್ಲಹಳ್ಳಿ ಸಿದ್ದಯ್ಯ, ಮಹಾದೇವ ರವಿ ಗೌಡ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಆನಂದ್, ಪಿಡಿಒ ರವಿಕುಮಾರ್, ಲಲಿತಾದ್ರಿಪುರ ಬಸವರಾಜು, ಮಾಜಿ ಅಧ್ಯಕ್ಷ ಸೋಮು ,ವಕೀಲರಾದ ಶಿವಪ್ರಸಾದ್, ಉಪ ತಹಸಿಲ್ದಾರ್ ಗೀತಾ ಹಾಗೂ ಗ್ರಾಮ ಪಂಚಾಯತಿಯ ಎಲ್ಲಾ ಸದಸ್ಯರು ಮುಖಂಡರು ಗ್ರಾಮಸ್ಥರು ಹಾಜರಿದ್ದರು.

ಹಿಂದಿನ ಲೇಖನಕಾಸರಗೋಡು: ನಿರ್ಮಾಣ ಹಂತದ ಮೇಲ್ಸೇತುವೆ ಕುಸಿತ – ಓರ್ವ ಕಾರ್ಮಿಕನಿಗೆ ಗಾಯ
ಮುಂದಿನ ಲೇಖನʼಕಾಂತಾರʼದ ‘ವರಾಹರೂಪಂ’ ಹಾಡಿಗೆ ಕೇರಳ ನ್ಯಾಯಾಲಯದ ನಿರ್ಬಂಧ